ಹುಕ್ಕೇರಿ: ಎಸ್ ಎಸ್ ಎಲ್ ಸಿ ಪರೀಕ್ಷೆ ಶುಕ್ರವಾರ ಪ್ರಾರಂಭವಾಗಿದ್ದು, ಹುಕ್ಕೇರಿ ತಾಲೂಕಿನಲ್ಲಿ 7314 ವಿದ್ಯಾರ್ಥಿಗಳು ಮೊದಲು ದಿನ ಪರೀಕ್ಷೆ ಬರೆದಿದ್ದಾರೆ ಅದರಲ್ಲಿ 113 ವಿದ್ಯಾರ್ಥಿಗಳು ಗೈರು ಆಗಿದ್ದರು.
ಹುಕ್ಕೇರಿ ತಾಲೂಕಿನಲ್ಲಿ 7114 ವಿದ್ಯಾರ್ಥಿಗಳು ಪರೀಕ್ಷೆ ಕಟ್ಟಿದ್ದು, 7001 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಪರೀಕ್ಷೆ ಸುಗಮವಾಗಿ ನಡೆದಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರತಿಭಾ ಪಾಟೀಲ್ ಹೇಳಿದ್ದಾರೆ.
ಇಂದಿನಿಂದ ಪ್ರಾರಂಭವಾದ ಎಸ್ಎಸ್ಎಲ್‌ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳನ್ನು ಶಿಕ್ಷಕರು ಹಲವು ಕಡೆ ವಿವಿಧ ರೀತಿಯಲ್ಲಿ ಸ್ವಾಗತಿಸಿಕೊಂಡರು. ತಾಲೂಕಿನಾದ್ಯಂತ ಪರೀಕ್ಷೆಯು ಸುಗಮ ನಿರ್ವಹಣೆಗೆ ಆಸನ ವ್ಯವಸ್ಥೆ, ಸಿಸಿ ಟಿವಿ, ವೆಬಕಾಷ್ಟಿಂಗ ಸೇರಿದಂತೆ ಎಲ್ಲ ಮೂಲಭೂತ ಸೌಕರ್ಯಗಳು ಒದಗಿಸಲಾಗಿತ್ತು.
ಪರೀಕ್ಷಾ ಕೇಂದ್ರಗಳ 200 ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಾಗಿದ್ದು, ಯಾವುದೇ ಅಕ್ರಮಗಳಿಗೆ ಅವಕಾಶ ನೀಡದಂತೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು , ವಿದ್ಯಾರ್ಥಿಗಳು ಭಯವಿಲ್ಲದೆ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಇಲಾಖೆಯಿಂದ ಕೈಗೊಂಡಿದ್ದರು.
ವರದಿ: ಕಲ್ಲಪ್ಪ ಪಾಮನಾಯಿಕ್