ಗೋಕಾಕ: ಪಟ್ಟಣದ ಸಾಹಿತಿಗಳಾದ ಶ್ರೀಮತಿ ವಿದ್ಯಾ ರೆಡ್ಡಿ ಅವರು ಕಾದಂಬರಿ, ಕಥಾ ಸಂಕಲನ, ಕವನ ಸಂಕಲನ, ಲೇಖನಗಳ ಸಂಕಲನ, ಚುಟುಕು ಸಂಕಲನ, ವಿಮರ್ಶಾ ಸಂಕಲನಗಳನ್ನು ಕನ್ನಡ ಸಾರಸ್ವತ ಲೋಕಕ್ಕೆ ನೀಡಿದ್ದಾರೆ. ಇವರು ಸಾಹಿತ್ಯ ಮತ್ತು ಸಂಘಟನೆಯಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ ಹಾಗೂ ತಾಲೂಕಾ ಘಟಕ ಮೂಡಲಗಿ ಇವರ ವತಿಯಿಂದ ಕೊಡಮಾಡುವ 2025 ನೇ ಸಾಲಿನ ಕಿತ್ತೂರ ರಾಣಿ ಚೆನ್ನಮ್ಮ ಜಿಲ್ಲಾ ಯುವ ಪ್ರಶಸ್ತಿಯನ್ನು ಶ್ರೀಮತಿ ವಿದ್ಯಾ ರೆಡ್ಡಿ ಅವರಿಗೆ ಕೊಡಲಾಯಿತು.
ಮೂಡಲಗಿ ಪಟ್ಟಣದ ಸತ್ಯಭಾಮಾ ಕಲ್ಯಾಣ ಮಂಟಪದಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ ಅರಭಾವಿ ಕಾರ್ಯಾಲಯ ಮೂಡಲಗಿ ಹಾಗೂ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ ತಾಲೂಕಾ ಘಟಕ ಮೂಡಲಗಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಕಿತ್ತೂರ ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮೂಡಲಗಿ ಸಿವಿಲ್ ಹಾಗೂ ಜೆ ಎಮ್ ಎಫ್ ಸಿ ನ್ಯಾಯಾಧೀಶರಾದ ಜ್ಯೋತಿ ಪಾಟೀಲ್, ತಹಶೀಲ್ದಾರ್ ಶಿವಾನಂದ ಬಬಲಿ, ಬಿಇಒ ಅಜೀತ್ ಮನ್ನಿಕೇರಿ, ಸಿಡಿಪಿಒ ಯಲ್ಲಪ್ಪ ಗದಾಡಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಜಿಲ್ಲಾಧ್ಯಕ್ಷರಾದ ಸಿದ್ದಣ್ಣ ದುರದುಂಡಿ ಅವರು ವಿದ್ಯಾ ರೆಡ್ಡಿ ಅವರಿಗೆ ಕಿತ್ತೂರು ರಾಣಿ ಚನ್ನಮ್ಮ ಜಿಲ್ಲಾ ಯುವ ಪ್ರಶಸ್ತಿ ಪ್ರಧಾನ ಮಾಡಿದರು.
ಈ ವೇಳೆ, ಖುರ್ಷಾದ ನದಾಫ್, ಉಪಾಧ್ಯಕ್ಷರಾದ ಭೀಮವ್ವಾ ಪೂಜೇರಿ, ತಾಲೂಕಾ ಪಂಚಾಯತ ಕಾರ್ಯನಿರ್ವಕ ಅಧಿಕಾರ ಎಫ್ ಜಿ ಚಿನ್ನಣ್ಣವರ, ಡಾ. ಭಾರತಿ ಕೋಣಿ, ನ್ಯಾಯವಾದಿಗಳಾದ ಲಕ್ಷ್ಮಿಣ್ಣ ಅಡಿಹುಡಿ, ಜ್ಯೋತಿ ಕುಡತೆ, ತಾಲೂಕಾ ಅಧ್ಯಕ್ಷರಾದ ಜಗದೀಶ ಡೊಳ್ಳಿ, ವಿಠ್ಠಲ ಪೂಜೇರಿ, ಮಹಾದೇವ ಮುರಗೋಡ, ರಾಘವೇಂದ್ರ ಲಂಬುಗೋಳ, ರಾಜ್ಯ ಯುವ ಪ್ರಶಸ್ತಿ ಪುರಸ್ಕೃತರಾದ ಸುಭಾಷ ಗೊಡೆಗೋಳ, ಕವಿರತ್ನ ಕಾಳಿದಾಸ ಪ್ರಶಸ್ತಿ ಪುರಸ್ಕೃತ ಯಲ್ಲಾಲಿಂಗ ವಾಳದ, ಕಸ್ತೂರಿ ಪಡೆನ್ನವರ, ಜಿಲ್ಲಾ ಯುವ ಪ್ರಶಸ್ತಿ ಪುರಸ್ಕೃತೆ ಮಾಯವ್ವಾ ದುರದುಂಡಿ, ಕಸ್ತೂರಿ ಪಡೆನ್ನವರ, ಇಂದ್ರಾ ಭೂವಿ, ಯಮುನಾ ತಳವಾರ ಹಾಗೂ ಈ ಮಹತ್ವದ ಸಮಾರಂಭದಲ್ಲಿ ಯುವ ಸಂಘದ ಪದಾಧಿಕಾರಿಗಳು, ವಿವಿಧ ಕ್ಷೇತ್ರಗಳ ಗಣ್ಯರು, ಮಹಿಳಾ ಮುಖಂಡರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.