ಹುಕ್ಕೇರಿ: ತಾಲೂಕಿನ ದಡ್ಡಿ ಗ್ರಾಮದಲ್ಲಿ ಶ್ರೀ ರಾಮಲಿಂಗೇಶ್ವರ ಜಾತ್ರೆಯ ನಿಮಿತ್ಯ 29 ರಂದು ಶನಿವಾರ ಶ್ರೀ ಕೃಷ್ಣ ಪಾರಿಜಾತ ಬಯಲಾಟ ಹಾಗೂ ರವಿವಾರದಂದು ದಿ.30 ರಂದು ಮಧ್ಯಾಹ್ನ 3 ಗಂಟೆಗೆ ಶ್ರೀರಾಮಲಿಂಗೇಶ್ವರ ದೇವಸ್ಥಾನದ ಹತ್ತಿರದ ಮೈದಾನದಲ್ಲಿ ಭವ್ಯ ಜಂಗಿ ಕುಸ್ತಿ ಪದ್ಯಾವಳಿ ಆಯೋಜನೆ ಮಾಡಲಾಗಿದೆ ಈ ಭಾಗದ ಪೈಲ್ವಾನರು ಭಾಗವಹಿಸಬಹುದು. ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ, ಕ್ರಮಾಂಕಕ್ಕೆ ಭವ್ಯ ಬಹುಮಾನ ನೀಡಲಾಗುವುದು. ಹಾಗೂ ಸಂಜೆ 7:00ಗೆ ಪಲ್ಲಕ್ಕಿ ಉತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.