ಕಕಮರಿ: ಗಡಿಭಾಗದ ಶಿಕ್ಷಣ ಕಾಶಿ ಎಂದೇ ಹೆಸರಾದ ಶ್ರೀ ಸದ್ಗುರು ರಾಯಲಿಂಗೇಶ್ವರ ಜ್ಞಾನ ವಿದ್ಯಾ ಸಂಸ್ಥೆಯು ಮಹಾರಾಷ್ಟ್ರ ಗಡಿಭಾಗದಲ್ಲಿ ಕನ್ನಡ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಪ್ರಾರಂಭವಾದ ಈ ಸಂಸ್ಥೆಯ 23 ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಸದ್ಗುರು ಅಭಿನವ ಗುರುಲಿಂಗ ಜಂಗಮ ಮಹಾಸ್ವಾಮಿಗಳ ಪೀಠಾಧ್ಯಕ್ಷರು ಶ್ರೀ ಸದ್ಗುರು ರಾಯಲಿಂಗೇಶ್ವರ ಸಂಸ್ಥಾನ ಮಠ ಕಕಮರಿ ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಗಾವಿ ಜಿಲ್ಲಾ ಅಮೇಚೂರ್ ಕಬಡ್ಡಿ ಅಸೋಸಿಯೇಶನ್ ಅಧ್ಯಕ್ಷರಾದ ರಾಹುಲ್ ಸತೀಶ್ ಜಾರಕಿಹೊಳಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಆನಂತರ ಮಾತನಾಡಿದ ಅವರು, ಕಳೆದ ಶೈಕ್ಷಣಿಕ ವರ್ಷದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಈ ಶೈಕ್ಷಣಿಕ ವರ್ಷದ ಅತ್ಯುತ್ತಮ ಕ್ರೀಡಾಪಟು, ಆದರ್ಶ ವಿದ್ಯಾರ್ಥಿ ಮತ್ತು ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ TOP 10 ಮೆಡಲ್ ಹಾಕಿ ಸಂಸ್ಥೆ ಬೆಳೆದು ಬಂದ ದಾರಿ ಶ್ರೀಗಳ ನಿರಂತರ ಪ್ರಯತ್ನ ಫಲವಾಗಿ ಇಂದು ಹೆಮ್ಮರವಾಗಿ ಬೆಳೆದು ನಿಂತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಗಿರೀಶ್ ರಾ ಬಸರಗಿ, ಸದಾಶಿವ ಬುಟಾಳೆ, ರಾವಸಾಬ ಐಹೋಳೆ,ಗಜಾನನ ಮಂಗಸೂಳಿ ಇತರರು ಉಪಸ್ಥಿತರಿದ್ದರು.