ಬೆಳಗಾವಿ: ಕಳೆದ 30 ವರ್ಷಗಳ ಹಿಂದೆ ಇದ್ದ ಕನ್ನಡ ಮರಾಠಿ ಭಾಷಿಕರ ಸಂಘರ್ಷ ಈಗಿಲ್ಲ. ಸರ್ಕಾರ ಯೋಜನೆ ಮತ್ತು ಕಾರ್ಯಕ್ರಮ ಹಾಕಿಕೊಂಡು ಭಾಷಾ ಸಂಘರ್ಷ ನಿಯಂತ್ರಿಸುವುದೇ ಒಳ್ಳೆಯದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು.
ನಗರದ ಕಾಂಗ್ರೆಸ್ ಕಚೇಯಲ್ಲಿ ನಡೆದ ಸುದ್ದಿಗೊಷ್ಠಿಯಲ್ಲಿ ಎಂ.ಇ.ಎಸ್. ನಿಷೇಧ ಕುರಿತು ಮಾತನಾಡಿ, ಎಂ.ಇ.ಎಸ್. ನಿಷೇಧಿಸುವುದರಿಂದ ವಿವಾದಕ್ಕೆ ಪರಿಹಾರ ಸಿಗಲ್ಲ. ಬ್ಯಾನ್ ಮಾಡಿದರೇ, ಮತ್ತೇ ಬೇರೆ ಹೆಸರಿನಲ್ಲಿ ಸಂಘಟನೆಗಳನ್ನು ಹುಟ್ಟುಹಾಕಿ ಸಕ್ರಿಯವಾಗುವ ಸಾಧ್ಯತೆಗಳಿವೆ ಎಂದರು.
ಇನ್ನು ಗಡಿ ಭಾಗದಲ್ಲಿ ಮಹಾರಾಷ್ಟ್ರ ಸರ್ಕಾರ ತನ್ನ ಯೋಜನೆಗಳನ್ನು ಜಾರಿ ಮಾಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಚಿವ ಸತೀಶ್ ಜಾರಕಿಹೊಳಿ ಅವರು, ಇದು ಇಲ್ಲಿನ ಮರಾಠಿ ಭಾಷಿಕರಿಗೆ ಪ್ರಯೋಜನಕ್ಕಾಗಿ ಅಲ್ಲ. ಮಹಾರಾಷ್ಟ್ರ ಸರ್ಕಾರ ಯೋಜನೆಗಳನ್ನು ಘೋಷಿಸಿರಬಹುದು. ಆದರೇ, ಎಲ್ಲರಿಗೂ ಅದರ ಸದುಪಯೋಗ ಸಿಗುವುದಿಲ್ಲ. ಆದರೆ ರಾಜ್ಯ ಸರ್ಕಾರದ ಯೋಜನೆಗಳು ಎಲ್ಲ ಭಾಷಿಕರಿಗೂ ತಲುಪುತ್ತಿವೆ. ಗಡಿ ಭಾಗದಲ್ಲಿ ಹೆಚ್ಚಿನ ನರೇಗಾ ಯೋಜನೆ ನೀಡಲಾಗುತ್ತಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಬೇರೆ ಭಾಷೆಯಲ್ಲಿ ಕಾಗದ ಪತ್ರಗಳಿದ್ದವು, ಆದರೇ ಈಗ ಕನ್ನಡದಲ್ಲಿಯೇ ನೀಡಲಾಗುತ್ತಿದೆ. ಇದರ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದರು.
ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿರುವುದು, ಬಂದ್ ಮಾಡಿರುವುದು ಇದೇ ಮೊದಲೆನಲ್ಲ. ಪ್ರತಿಭಟನೆ ಮಾಡಲಿ, ಅದು ಅವರ ಹಕ್ಕು. ಆದರೆ ಬಂದ್‌ನಿಂದ ಶಾಲಾ-ಕಾಲೇಜು, ಆಸ್ಪತ್ರೆ, ವ್ಯಾಪಾರ ವಹಿವಾಟಕ್ಕೆ ತೊಂದರೆ ಆಗಬಾರದು ಎಂದರು.
ಇನ್ನು ಸಚಿವ ಕೆ.ಎನ್. ರಾಜಣ್ಣ ಹನಿಟ್ರ್ಯಾಪ್ ಕುರಿತು ಪ್ರತಿಕ್ರಿಯೆ ನೀಡಿ, ಹನಿಟ್ರ್ಯಾಪ್ ಕೇಸ್ ಗೆ ಸಂಬಂಧಿಸಿದಂತೆ ಸಚಿವ ಕೆ.ಎನ್. ರಾಜಣ್ಣ ಅವರು ದೂರು ದಾಖಲಿಸಿದರೆ ತನಿಖೆ ನಡೆಯುತ್ತದೆ. ದೂರು ನೀಡಲು ಸಮಯ ಇದೆ. ಗರ್ಜಿಸುವ ಹುಲಿಗಳಿಗೆ ಹನಿಟ್ರ್ಯಾಪ್ ಮಾಡಲಾಗುತ್ತಿದೆ ಎಂದು ದೂರಿದರು. ಈ ಪ್ರಕರಣ ಸಿಬಿಐಗೆ ನೀಡುವ ಅಗತ್ಯವಿಲ್ಲ. ದೂರು ದಾಖಲಿಸಿದರೆ ಪೊಲೀಸರೇ ತನಿಖೆ ನಡೆಸುತ್ತಾರೆ. ಈ ಹಿಂದೆ ಯಾರು ಸೂತ್ರದಾರ ಇದ್ದಾರೆ ಎಂಬುವುದು ಹೊರಗೆ ಬರಬೇಕೆಂದು ತಿಳಿಸಿದರು.
ಇನ್ನು ಬಿಜೆಪಿ ಶಾಸಕ ಮುನಿರತ್ನ ಡಿ.ಕೆ ಶಿವಕುಮಾರ್ ವಿರುದ್ಧ ಆರೋಪ ಮಾಡಿರುವ ಕುರಿತು ಪ್ರತಿಕ್ರಿಯೆ ನೀಡಿ, ಮುನಿರತ್ನ ಅವರು ಆರೋಪ ಮಾಡಿದ್ದಾರೆ ಎಂದು ನಾವು ಆರೋಪ ಮಾಡಲು ಆಗಲ್ಲ. ಪೊಲೀಸ್ ತನಿಖೆ ಆಗಲಿ. 40 ಜನ ಇರಬಹುದು ಎಂದು ಅಷ್ಟೇ ರಾಜಣ್ಣ ಹೇಳಿದ್ದಾರೆ. ಅದರ ಸಂಖ್ಯೆ 400 ಕೂಡ ಇರಬಹುದು ಎಂದಿದ್ದಾರೆ.
ಹೈ ಅಂದರೆ ನೀವೇಕೆ ಹಲೋ ಅಂತೀರಾ..? ಎಂಬ ಡಿಕೆಶಿ ಹೇಳಿಕೆ ಪ್ರತಿಕ್ರಿಯೆ ನೀಡಿ, ವಿಲ್ಹ್ ಪವರ್, ಅನುಭವ ಬದ್ದತೆಯ ಮೇಲೆ ಇದು ನಿರ್ಧಾರ ಆಗುತ್ತದೆ. ಒಂದು ಸಲ ಹೈ ಅಂದರೆ ಅಟ್ರ್ಯಾಕ್ಟ್ ಆಗಿತ್ತು. ಎರಡನೇ ಸಲಕ್ಕೆ ಆಗುತ್ತಾ..? ಗಟ್ಟಿ ಇದ್ದರೆ ಆಗಲ್ಲ, ಸ್ವಲ್ಪ ವೀಕ್ನೆಸ್ ಇದ್ದರೆ ಒಂದೇ ಸಲಕ್ಕೆ ಮೊಬೈಲ್ ರಿಂಗ್ ಆಗೋಕೆ ಶುರು ಆಗುತ್ತೆ. ಮೊದಲೇ ಹೆದರಿಕೆ ಇದ್ದರೆ 10 ಬಾರಿ ಹೈ ಅಂದರೂ ಹಲೋ ಅನ್ನಲ್ಲ ಎಂದಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ವಿನಯ ನಾವಲಗಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುನೀಲ್ ಹಣಮನ್ನವರ್, ಸಿದ್ದಿಕ್ ಅಂಕಲಗಿ, ರಾಜಾ ಸಲೀಂ ಸೇರಿದಂತೆ ಹಲವು ಮುಖಂಡರಿದ್ದರು.
ವರದಿ:ಕಲ್ಲಪ್ಪ ಪಾಮನಾಯಿಕ್