Live Stream

[ytplayer id=’22727′]

| Latest Version 8.0.1 |

Local News

ಗೋಕಾಕ ನಗರದ ಶಾಲೆಗಳಿಗೆ 9 ದಿನ ರಜೆ: ಜಿಲ್ಲಾಧಿಕಾರಿ ಮಾಹಿತಿ

ಗೋಕಾಕ ನಗರದ ಶಾಲೆಗಳಿಗೆ 9 ದಿನ ರಜೆ: ಜಿಲ್ಲಾಧಿಕಾರಿ ಮಾಹಿತಿ

ಬೆಳಗಾವಿ: ಗೋಕಾಕ ನಗರದಲ್ಲಿ ನಡೆಯಲಿರುವ ಪ್ರಸಿದ್ಧ ಲಕ್ಷ್ಮೀ ದೇವಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯ ಎಲ್ಲ ಶಾಲೆಗಳಿಗೆ 9 ದಿನಗಳ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಪ್ರತಿ ವರ್ಷ ಲಕ್ಷಾಂತರ ಭಕ್ತರು ಗೋಕಾಕ್‍ನ ಗ್ರಾಮದೇವತೆಯಾದ ಲಕ್ಷ್ಮೀ ದೇವಿ ಜಾತ್ರೆಗೆ ಆಗಮಿಸುತ್ತಾರೆ. ಭಕ್ತರ ಸಂಚಾರಿ ಸಂಖ್ಯೆಯಲ್ಲಿ ಹೆಚ್ಚಿನ ಬೆಳವಣಿಗೆ ಇದ್ದು, ಈ ವೇಳೆ ರಸ್ತೆ ಸಂಚಾರದಲ್ಲಿ ವ್ಯತ್ಯಯ, ಭದ್ರತಾ ಕ್ರಮಗಳು, ಮಕ್ಕಳ ಹಿತದೃಷ್ಟಿಯಿಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕಾಗಿದೆ,” ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗೋಕಾಕ್ ನಗರಪಾಲಿಕೆ ವ್ಯಾಪ್ತಿಯ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಜೂನ್ 30ರಿಂದ ಜುಲೈ 8ರವರೆಗೆ ರಜೆ ಘೋಷಿಸಲಾಗಿದೆ.

ಜಾತ್ರಾ ಸಿದ್ಧತೆ ನಡೆದಿದ್ದು, ಸಾರ್ವಜನಿಕರ ಸಹಕಾರದಿಂದ ಶಾಂತಿಪೂರ್ಣವಾಗಿ ಜಾತ್ರೆ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ಆಶಾಭಾವನೆ ವ್ಯಕ್ತಪಡಿಸಿದರು.

ವರದಿ: ಚೇತನ ಡಿ.ಕೆ
ನಮ್ಮೂರ ಧ್ವನಿ ನ್ಯೂಸ್
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ
+91 9164577143

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";