ರಾಷ್ಟ್ರೀಯ ಗ್ರಂಥಾಲಯ ದಿನಾಚರಣೆ*
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ಡಾ. ಬಿ. ಆರ್. ಪಟಗುಂದಿ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ತಮ್ಮ ವ್ಯಕ್ತಿತ್ವ ರೂಪಿಸುವ ಗ್ರಂಥಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ವ್ಯಾಸಂಗದ ಅವಧಿಯಲ್ಲಿ ಗ್ರಂಥಾಲಯದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡರೆ ಉಜ್ವಲ ಭವಿಷ್ಯ ನಿರ್ಮಾಣಗೊಳ್ಳುತ್ತದೆ. ಕಾಲೇಜಿನ ಗ್ರಂಥಾಲಯದಲ್ಲಿ ಪ್ರತಿವರ್ಷ ಹೊಸ ಹೊಸ ಪುಸ್ತಕ ಡಿಜಿಟಲ್ ರೂಪದಲ್ಲಿ ಅಳವಡಿಸಲಾಗುತ್ತಿದ್ದು, ವಿದ್ಯಾರ್ಥಿಗಳು ಇದರ ಸದ್ಬಳಕೆ ಮಾಡಿಕೊಂಡು ತಮ್ಮ ಜ್ಞಾನ ವೃದ್ಧಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಗ್ರಂಥ ಪಾಲಕಿ ನಳಿನಿ ಅಂಬಲಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ. ಲಕ್ಷ್ಮಿ ಪಾಟೀಲ ನಿರೂಪಿಸಿ ವಂದಿಸಿದರು. ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಅಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಗ್ರಂಥಾಲಯ ಸಿಬ್ಬಂದಿ ಉಪಸ್ಥಿತರಿದ್ದರು.