ಚಿಕ್ಕೋಡಿ: ತಾಲೂಕಿನ ಅಂಕಲಿ ಗ್ರಾಮದಲ್ಲಿ, ಗ್ರಾಮ ಪಂಚಾಯತಿಯ ಸಭಾಂಗಣದಲ್ಲಿ ಗ್ರಾಮ ಪಂಚಾಯತಿಯ ಕಾರ್ಯಪಡೆ ಸಭೆಯನ್ನು ನಡೆಸಲಾಯಿತು.
ಗ್ರಾಮೀಣ ಭಾಗದ ಜನರಿಗೆ ಸುಲಭವಾಗಿ ಆರೋಗ್ಯ ಸೇವೆಗಳನ್ನು ತಲುಪಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಮನ್ವಯತೆ ಮತ್ತು ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ ಇವರ ತಾಂತ್ರಿಕ ಬೆಂಬಲದೊಂದಿಗೆ ಇತ್ತೀಚೆಗೆ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ, ಗ್ರಾಮ ಪಂಚಾಯತಿಯ ಸಭಾಂಗಣದಲ್ಲಿ ಗ್ರಾಮ ಪಂಚಾಯತಿಯ ಕಾರ್ಯಪಡೆ ಸಭೆಯನ್ನು ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ಮಾತನಾಡಿದ ಕೆ. ಎಚ್. ಪಿ. ಟಿ ಜಿಲ್ಲಾ ಕಾರ್ಯಕ್ರಮ ಸಂಯೋಜಕರಾದ ಡಾ. ನಿಂಗಮ್ಮ ವಿ. ಜಂತ್ಲಿ ಅವರು ಗ್ರಾಮ ಆರೋಗ್ಯದ ಕುರಿತು ಕಾರ್ಯಪಡೆಯ ರೂಪರೇಷೆಗಳನ್ನು ತಿಳಿಸಿದರು. ಗ್ರಾಮ ಆರೋಗ್ಯ ಕಾರ್ಯಕ್ರಮದಲ್ಲಿ ನಡೆಯುವ ಆರೋಗ್ಯ ಶಿಬಿರಗಳನ್ನು ಜಾಗೃತಿ ಶಿಬಿರಗಳನ್ನು ಯಾವ ರೀತಿಯಾಗಿ ನಡೆಸಬೇಕು ಯಾರು ಇದಕ್ಕೆ ಅರ್ಹರು, ಒಟ್ಟಾಗಿ ಎಷ್ಟು ಆರೋಗ್ಯ ಶಿಬಿರಗಳು ನಡೆಯಬೇಕು, ಎಷ್ಟು ಜನ ಶಿಬಿರಕ್ಕೆ ಹಾಜರಿರಬೇಕು, ಎಂದು ತಿಳಿಸಿದರು. ಸಭೆಯಲ್ಲಿ ಚರ್ಚಿಸಿದಂತೆ ಆರೋಗ್ಯ ಶಿಬಿರಗಳನ್ನು ನಡೆಸುವಂತೆ ಕ್ರಿಯಾ ಯೋಜನೆಗಳನ್ನು ತಯಾರಿಸಲು ಮಾಹಿತಿ ನೀಡಿದರು.
ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಬಿ. ಪಿ, ಶುಗರ್, ಟಿ. ಬಿ, ಅನಿಮಿಯ, ಅಪೌಷ್ಟಿಕತೆ, ಮಾನಸಿಕ ಆರೋಗ್ಯ, ಮುಟ್ಟಿನ ನೈರ್ಮಲ್ಯ ವಿಷಯಗಳಲ್ಲಿ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಿ ಅವರ ಆರೋಗ್ಯವನ್ನು ತಪಾಸಣೆ ಮಾಡುವ ಶಿಬಿರಗಳು ನಡೆಯುತ್ತವೆ. ಈ ಕಾರ್ಯಕ್ರಮವು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವ ಮಹೋದ್ದೇಶದಿಂದ ಈ ಕಾರ್ಯಕ್ರಮ ಮಾಡಲಾಯಿತು.
ಚಿಕ್ಕೋಡಿ ತಾಲೂಕಿನ ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯತ ಅಭಿವೃದ್ಧಿ ಅಧಿಕಾರಿ, ಸೆಕ್ರೆಟರಿ, ಸಮುದಾಯ ಆರೋಗ್ಯ ಅಧಿಕಾರಿ, ಶುಶ್ರುಕಿಯರು, ಸಂಜೀವಿನಿ ಒಕ್ಕೂಟದ ಮಹಿಳೆಯರು, ಆಶಾ ಕಾರ್ಯಕರ್ತೆಯರು, ಶಾಲಾ ಶಿಕ್ಷಕರು, ಗ್ರಾಮದ ಚುನಾಯಿತ ಸದಸ್ಯರು, ಈ ಸಭೆಯಲ್ಲಿ ಪಾಲ್ಗೊಂಡಿದ್ದರು.