ಬೆಳಗಾವಿ: ಇಲ್ಲಿನ ಖಾನಾಪುರ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಖಾಸಗಿ ಲಾಡ್ಜ್ ಮೇಲೆ ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಲಾಡ್ಜ್ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ಹನ್ನೊಂದು ಯುವಕರನ್ನ ವಶಕ್ಕೆ ಪಡೆಯಲಾಗಿದೆ.
ಪೊಲೀಸ್ ಇನ್ಸ್ ಪೆಕ್ಟರ್ ಮಂಜುನಾಥ್ ನಾಯಕ್ ನೇತೃತ್ವದ ತಂಡದಿಂದ ಜಿಲ್ಲೆಯ ಖಾನಾಪುರ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಖಾಸಗಿ ಲಾಡ್ಜ್ ಮೇಲೆ ದಾಳಿ ನಡೆಸಲಾಗಿದೆ.
ದಾಳಿಯ ವೇಳೆ ಐವರು ಯುವತಿಯರನ್ನು ರಕ್ಷಿಸಲಾಗಿದ್ದು, ಅವರನ್ನ ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ. ಜೊತೆಗೆ ಪ್ರಕರಣದಲ್ಲಿ ಭಾಗಿಯಾಗಿದ್ದ ಹನ್ನೊಂದು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸದ್ಯ ಲಾಡ್ಜ್ ಮಾಲೀಕ ವಿನಾಯಕ ಲಕ್ಷ್ಮಣ ಮಂಜರೇಕರ ವಿರುದ್ಧ ಅನೈತಿಕ ಸಂಚಾರ ತಡೆ ಕಾಯ್ದೆ (ಐಟಿಪಿಎ) ಅಡಿಯಲ್ಲಿ ದೂರು ದಾಖಲಾಗಿದ್ದು, ವಿಚಾರಣೆ ನಡೆಸುತ್ತಿದ್ದಾರೆ.