ಬೆಳಗಾವಿ ಇತ್ತೀಚಿಗೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಜಡೆ ಗ್ರಾಮದಲ್ಲಿ ನಡೆದ 17 ವರ್ಷ ಒಳಗಿನ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ನಗರದ ಸಿದ್ಧರಾಮೇಶ್ವರ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಪಾಲ್ಗೊಂಡು ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿನಿಯರ ಈ ವಿಶೇಷ ಸಾಧನೆಗೆ ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು, ಸಂಸ್ಥೆಯ ಕಾರ್ಯದರ್ಶಿ ಎಸ್. ಪಿ. ಹಿರೇಮಠ, ಪ್ರೌಢಶಾಲೆಯ ಉಪಪ್ರಾಚಾರ್ಯ ಶಿವಲೀಲಾ ಪೂಜಾರ, ದೈಹಿಕ ನಿರ್ದೇಶಕರಾದ ಶ್ರೀಧರ ನೇಮಗೌಡ ಹಾಗೂ ರಿತೇಶ್ ಸಜ್ಜನ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
Nammur Dhwani > State News > ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಸಿದ್ಧರಾಮೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿನಿಯರ ವಿಶೇಷ ಸಾಧನೆ