ಬೆಳಗಾವಿ ನ.೧೧ (ಕರ್ನಾಟಕ ವಾರ್ತೆ): ೨೦೨೩-೨೪ನೇ ಸಾಲಿನ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ(PಒಏSಙ) ಪ್ರತಿ ಹನಿಗೆ ಅಧಿಕ ಬೆಳೆ (ಸೂಕ್ಷö್ಮ ನೀರಾವರಿ) ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸುವ ಎಲ್ಲಾ ವರ್ಗದ ರೈತರಿಗೆ ಗರಿಷ್ಠ ೫ ಹೆಕ್ಟೇರ್ ಪ್ರದೇಶದವರೆಗೆ ಸಹಾಯಧನ ಹಾಗೂ ತರಕಾರಿ ಮತ್ತು ಹೂ ಬೆಳೆಗಳಿಗೆ ಗರಿಷ್ಠ ೨ ಹೆಕ್ಟೇರ್ ಪ್ರದೇಶಕ್ಕೆಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಗೆ ಗರಿಷ್ಠ ೨ ಹೆಕ್ಟೇರ್ ವರೆಗೆ ಶೇ.೯೦ ರಷ್ಟು ಸಹಾಯಧನ ನೀಡಲು ಅವಕಾಶವಿರುತ್ತದೆ. ಇತರೆ ವರ್ಗದ ರೈತರಿಗೆ ಗರಿಷ್ಠ ೨ ಹೆಕ್ಟೇರ್ ವರೆಗೆ ಶೇ.೭೫ ರಷ್ಟು ಸಹಾಯಧನ ನೀಡಲು ಅವಕಾಶವಿರುತ್ತದೆ. ೨ ಹೆಕ್ಟೇರ್ ಮೇಲ್ಪಟ್ಟು ೫ ಹೆಕ್ಟೇರ್ ವರೆಗೂ ಶೇ.೪೫ ರಷ್ಟು ಸಹಾಯಧನ ನೀಡಲಾಗುತ್ತಿದೆ.
ಆಸಕ್ತ ರೈತರು ಸಂಬAಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕು ತೋಟಗಾರಿಕೆ ಕಛೇರಿಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕಾಗಿ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿ.ಪಂ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.