ಬೆಳಗಾವಿ: ನಗರದ ಮಹೇಶ್ವರಿ ಅಂಧ ಮಕ್ಕಳ ಶಾಲೆಯಲ್ಲಿ, ರಾಜ್ಯ ಬಾಲ ಭವನ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಬೆಳಗಾವಿ, ಜಿಲ್ಲಾ ಬಾಲ ಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆ ಬೆಳಗಾವಿ ಇವರುಗಳ ಸಂಯುಕ್ತ ಆಶ್ರಯದಲ್ಲಿ 2024-25 ನೇ ಸಾಲಿನ 6 ರಿಂದ 16 ವರ್ಷದ ಮಕ್ಕಳಿಗೆ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ನಡೆಯಿತು.
ನಂತರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿಯ ಉಪ ನಿರ್ದೇಶಕರಾದ ನಾಗರಾಜ್. ಆರ್ ಮಾತನಾಡಿ ನಮ್ಮ ಮಕ್ಕಳು ಮೊದಲು ಎಲ್ಲ ಸ್ಪರ್ಧೆಯಲ್ಲಿ ಭಾಗವಹಿಸಬೇಕು. ಅದಕ್ಕಾಗಿಯೇ ವಿವಿಧ ಕಾರ್ಯಕ್ರಮಗಳನ್ನ ಆಯೋಜಿಸಲಾಗಿದೆ. ಇಲ್ಲಿ ಆಯ್ಕೆಯಾದ ಹಲವು ಮಕ್ಕಳು ಟಿ.ವಿ ಕಾರ್ಯಕ್ರಮಗಳಲ್ಲಿಯೂ ಭಾಗವಹಿಸುತ್ತಿದ್ದಾರೆ, ಅದಕ್ಕಾಗಿ ಆಯ್ಕೆಯಾಗುತ್ತಿದ್ದರೆ. ಹಾಗಾಗಿ ಎಲ್ಲರೂ ವೇದಿಕೆಯನ್ನು ಬಳಸಿಕೊಳ್ಳಿ ಎಂದು ಹೇಳಿದರು.
ಈ ಸಮಾರಂಭದಲ್ಲಿ ಮಕ್ಕಳಿಗಾಗಿ ವಿವಿಧ ರೀತಿಯ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಅದರಲ್ಲಿ ಗಾಯನ, ವಾದನ, ನೃತ್ಯ ಚಿತ್ರಕಲೆ ಹಾಗೂ ವಿಜ್ಞಾನ ನಮೂನೆಗಳ ಪ್ರದರ್ಶನವನ್ನು ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿ ಉಪನಿರ್ದೇಶಕರಾದ, ನಾಗರಾಜ್.ಆರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಅಣ್ಣಪ್ಪ ಹೆಗಡೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳಾದ ಶ್ರೀಮತಿ ಪರ್ವೀನ್, ಮಹಿಳಾ ಕಲ್ಯಾಣ ಸಂಸ್ಥೆ ಬೆಳಗಾವಿಯ ಸಂಸ್ಥಾಪಕರಾದ ಎಂ.ಎಸ ಚೌಗಲಾ, ಅನಿತಾ ಗಾವಡೆ ಪ್ರಾಂಶುಪಾಲರು ಮಹೇಶ್ವರಿ ಅಂಧ ಮಕ್ಕಳ ಶಾಲೆ ಬೆಳಗಾವಿ, ಸಿಬ್ಬಂದಿವರ್ಗ ಹಾಗೂ ಎಲ್ಲ ಮಕ್ಕಳು ಉಪಸ್ಥಿತರಿದ್ದರು.