ಬೆಳಗಾವಿ -ವಿಧಾನಸಭೆಯ ಸಭಾಧ್ಯಕ್ಷರಾದ ಸನ್ಮಾನ್ಯ ಶ್ರೀ ಯು. ಟಿ. ಖಾದರ್ ಅವರ ನೇತೃತ್ವದಲ್ಲಿ, ಜನಮಾನಸದಲ್ಲಿ ಸದಾ ಸ್ಮರಣೀಯವಾಗಿ ಉಳಿಯುವ ಮತ್ತೊಂದು ಐತಿಹಾಸಿಕ ಕ್ಷಣವು, ಬೆಳಗಾವಿಯ ಸುವರ್ಣ ಸೌಧದಲ್ಲಿ ದಾಖಲಾಗಲಿದೆ. ವಿಶ್ವಗುರು ಶ್ರೀ ಬಸವಣ್ಣನವರು ಸ್ಥಾಪಿಸಿದ, “ವಿಶ್ವದ ಮೊದಲ ಸಂಸತ್ತು” ಎಂಬ ಖ್ಯಾತಿಯ, “ಅನುಭವ ಮಂಟಪದ” ಬೃಹತ್ ತೈಲವರ್ಣ ಚಿತ್ರವು ಅನಾವರಣವು ಶ್ರೀ ಯು. ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ, ಚಳಿಗಾಲ ಅಧಿವೇಶನದ ಮೊದಲ ದಿನದಂದು, ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರ ಅಮೃತ ಹಸ್ತದಿಂದ ಅನಾವರಣಗೊಳ್ಳಲಿರುವುದು.
ಇದು ಕೇವಲ ಒಂದು ತೈಲ ಚಿತ್ರ ಅನಾವರಣ ಕಾರ್ಯಕ್ರಮ ಅಲ್ಲ ಬದಲಾಗಿ ನಮ್ಮ ಪ್ರಜಾಪ್ರಭುತ್ವದ ಮೂಲ ಆಶಯಗಳು, ಸಮಾನತೆ, ಮಾನವೀಯ ಸಂದೇಶಗಳನ್ನು ಜಗತ್ತಿಗೆ ಮತ್ತೊಮ್ಮೆ ಪರಿಚಯಿಸುವ ಹಾಗೂ ಶ್ರೀ ಮಹಾತ್ಮಾ ಗಾಂಧೀಜಿಯವರು ಅಧಿವೇಶನದಲ್ಲಿ ಪಾಲ್ಗೊಂಡ ಶತಮಾನೋತ್ಸವದ, ಸ್ಮರಣರ್ಥವಾಗಿ ನಡಯುವ ಒಂದು ಮಹತ್ವದ ಐತಿಹಾಸಿಕ ಕ್ಷಣವಾಗಿದೆ. ಕ್ಯಾನ್ವಾಸ್ ಮೇಲೆ ತೈಲ ಮಾಧ್ಯಮದ ಮೂಲಕ ರಚಿಸಲ್ಪಟ್ಟ ೨೦ ಅಡಿ ಉದ್ದ ಮತ್ತು ೧೦ ಅಡಿ ಅಗಲದ ಈ ವಿಶೇಷ ಚಿತ್ರಕ್ಕೆ ಜೀವಂತಿಗೆ ಮತ್ತು ನೈಜತೆ ತುಂಬಿದವರು, ಶ್ರೀ ಬಿ.ಎಲ್. ಶಂಕರ್ ನೇತೃತ್ವದಲ್ಲಿ, ಪ್ರಖ್ಯಾತ ಕಲಾವಿದರಾದ – ಬೆಂಗಳೂರು ಚಿತ್ರಕಲಾ ಪರಿಷತ್ ನ ಶ್ರೀ ಸತೀಶ್ ರಾವ್ ಶಿವಮೊಗ್ಗ ಶ್ರೀಕಾಂತ್ ಹೆಗಡೆ ಸಿದ್ದಾಪುರ, ಶೇಷಾದ್ರಿಪುರಂ ಕೆನ್ ಸ್ಕೂಲ್ ಕಲಾಶಾಲೆಯ ಶ್ರೀ ಅಶೋಕ್ ಯು, ಜಗಳೂರು ರಾಜಾ ರವಿರ್ಮ ಕಲಾಶಾಲೆಯ ರೂಪಾ ಎಂ.ಆರ್, ಶ್ರೀ ವೀರಣ್ಣ ಮಡಿವಾಳಪ್ಪ ಬಬ್ಲಿ, ಬೈಲಹೊಂಗಲ ಮತ್ತು ಶ್ರೀ ಮಹೇಶ ನಿಂಗಪ್ಪ, ದಫಲಾಪುರ, ಜಮಖಂಡಿ ಅವರು. ಮೊದಲ ಸಭಾಧ್ಯಕ್ಷರಾದ ಶ್ರೀ ಅಲ್ಲಮಪ್ರಭು ಅವರ ಮುಂದಾಳುತ್ವದಲ್ಲಿ ಅಜರಾಮರ ಚಿಂತನೆಗಳನ್ನು ಮತ್ತು ಅನನ್ಯ ತತ್ತ್ವಜ್ಞಾನವನ್ನು ಪ್ರತಿಬಿಂಬಿಸಿದ ಈ ಪವಿತ್ರ ವೇದಿಕೆಯು, ಕೇವಲ ಶರಣ ಚಿಂತನೆಗಳ ಕೇಂದ್ರವಾಗಿರದೆ, ಸಮಸ್ತ ಮನುಕುಲದ ಏಳಿಗೆಗೆ ಶಾಶ್ವತ ಆರ್ಶಗಳನ್ನು ನೀಡಿ, ಮಾನವೀಯತೆ ಮತ್ತು ಸಮಾನತೆಯ ಮಹಾನ್ ಸಂದೇಶವನ್ನು ಸಮಸ್ತ ವಿಶ್ವಕ್ಕೆ ತೋರಿಸಿಕೊಟ್ಟ ಶಕ್ತಿ ಕೇಂದ್ರವಾಗಿತ್ತು. ಇದು ರ್ವಜಾತಿ, ರ್ಮಗಳ ಶರಣರನ್ನು ಸ್ವೀಕರಿಸಿದ ಪವಿತ್ರ ತಾಣವಾಗಿದ್ದು, ಅಕ್ಕಮಹಾದೇವಿ, ಮಾದಾರ ಚೆನ್ನಯ್ಯ, ಅಂಬಿಗರ ಚೌಡಯ್ಯ, ಸಿದ್ದರಾಮೇಶ್ವರ, ಮಡಿವಾಳ ಮಾಚಿದೇವ, ದೋಹರ ಕಕ್ಕಯ್ಯ, ಮೇದಾರ ಕೇತಯ್ಯ, ಬಹುರೂಪಿ ಚೌಡಯ್ಯ, , ಕೇತಲದೇವಿ, ದುಗ್ಗಳೆ, ಕಾಳವ್ವ ಮೊದಲಾದ ಶರಣರ ದಿವ್ಯ ಚಿಂತನೆಯನ್ನು ಮತ್ತು ಅನುಭವಗಳನ್ನು ಜಗತ್ತಿಗೆ ಪರಿಚಯಿಸಿದ ಪುಣ್ಯ ಸ್ಥಳವಾಗಿದೆ.
ಬೆಳಗಾವಿ ಸುವರ್ಣ ಸೌಧದೊಳಗೆ ಸೋಮವಾರ, ಡಿಸೆಂಬರ್ ೯, ೨೦೨೪ರಂದು, ಬೆಳಿಗ್ಗೆ ೧೦.೩೦ಕ್ಕೆ* ನಡೆಯುವ ಕರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯ ಅತಿಥಿಯಾಗಿರುವರು. ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ, ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಹಾಗೂ ವಿರೋಧಪಕ್ಷದ ನಾಯಕ ಆರ್. ಅಶೋಕ್ ಅವರು ಉಪಸ್ಥಿತರಿದ್ದು, ಈ ಐತಿಹಾಸಿಕ ಕರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.