ಬೆಳಗಾವಿ: ಪ್ರಸ್ತುತವಾಗಿ ಬೆಳಗಾವಿಯಲ್ಲಿ ಜರುಗಿದ ಅಧಿವೇಶನದ ಸಂದರ್ಭದಲ್ಲಿ ಅತ್ಯುತ್ತಮ ಕಾರ್ಯನಿರ್ವಹಣೆಗಾಗಿ ಬೆಳಗಾವಿಯ ಪೊಲೀಸ್ ಧಿಕಾರಿಯೊಬ್ಬರಿಗೆ ನಗದು ಬಹುಮಾನ ಘೋಷಿಸಲಾಗಿದೆ.
ಬೆಳಗಾವಿಯ ಸಿಇಎನ್ ಪೊಲೀಸ್ ಠಾಣೆ ಇನಸ್ಪೆಕ್ಟರ್ ಬಿ.ಆರ್.ಗಡ್ಡೇಕರ್ ಅವರಿಗೆ 10 ಸಾವಿರ ರೂ. ನಗದು ಬಹುಮಾನ ಘೋಷಿಸಿ ಡಿ.ಜಿ. ಮತ್ತು ಐಜಿಪಿ ಅಲೋಕ್ ಮೋಹನ್ ಆದೇಶ ಹೊರಡಿಸಿದ್ದಾರೆ. ಅಧಿವೇಶನದ ಸಂದರ್ಭದಲ್ಲಿ ಅತ್ಯುತ್ಮ ಕರ್ತವ್ಯ ನಿರ್ವಹಣೆಗಾಗಿ ನಗದು ಬಹುಮಾನ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ. ಇವರ ಸೇವೆ ಇತರರಿಗೂ ಮಾದರಿಯಾಗಲಿ ಎಂದು ಆಶಿಸೋಣ ಮತ್ತು ನಮ್ಮೂರ ಧ್ವನಿ ನ್ಯೂಸ್ ಪೊರಟಲ್ ಪರವಾಗಿ ಅಭಿನಂದನೆಗಳನ್ನು ಸಲ್ಲಿಸೋಣ