8ನೇ ವೇತನ ಆಯೋಗ: ಕೇಂದ್ರ ಸರ್ಕಾರಿ ನೌಕರರ ವೇತನ ಮತ್ತು ಪಿಂಚಣಿದಾರರ ಭತ್ಯೆಗಳನ್ನು ಪರಿಷ್ಕರಿಸಲು 8ನೇ ವೇತನ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ 8ನೇ ವೇತನ ಆಯೋಗವನ್ನು ಸ್ಥಾಪಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಆಯೋಗದ ಅಧ್ಯಕ್ಷರು ಹಾಗೂ ಇಬ್ಬರು ಸದಸ್ಯರನ್ನು ಶೀಘ್ರ ನೇಮಕ ಮಾಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮತ್ತು ಇತರ ಮಧ್ಯಸ್ಥಗಾರರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ಸಚಿವರು ಹೇಳಿದರು.