ಯಮಕನಮರಡಿ: ಪ್ರಯಾಗ್ರಾಜ್ನಲ್ಲಿ ನಡೆದ ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಬೆಳಗಾವಿಯ ವಡಗಾವಿ ನಿವಾಸಿಗಳಾದ ಜ್ಯೋತಿ ಹತ್ತರವಾಠ್ (50) ಮೇಘಾ ಹತ್ತರವಾಠ್, ಶೆಟ್ಟಿಗಲ್ಲಿ ನಿವಾಸಿ ಅರುಣ್ ಕೋಪರ್ಡೆ ಹಾಗೂ ಶಿವಾಜಿ ನಗರದ ಮಾಹಾದೇವಿ ಭವನೂರ ಅವರು ಮೃತಪಟ್ಟಿರುವುದು ತಿಳಿದು ದುಃಖಿತನಾಗಿದ್ದೇನೆ. ಆ ದೇವರು ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿ ಹಾಗೆ ಮೃತರ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ವಿಷಯ ತಿಳಿಸಿದ ಅವರು, ಪ್ರಯಾಗ್ರಾಜ್ ಮಹಾಕುಂಭದಲ್ಲಿ ಏಕಾಏಕಿ ಜನಸಂದಣಿ ಹೆಚ್ಚಾದ ಕಾರಣ ಮಾತಿನ ಚಕಮಕಿ ಉಂಟಾಗಿದೆ. ಈ ವೇಳೆ ಕಾಲ್ತುಳಿತದಿಂದ ಬೆಳಗಾವಿ ಮೂಲದ ನಾಲ್ವರು ಸಾವಣ್ಣಪ್ಪಿದ್ದಾರೆ. ಅಲ್ಲದೇ ಈ ಮಹಾಕುಂಭಮೇಳದಲ್ಲಿ ಬೆಳಗಾವಿ ಮೂಲದ 30 ಜನರು ಭಾಗವಹಿಸಿದ್ದು, ಕೆಲವರು ಗಾಯಗೊಂಡಿರುವ ಮಾಹಿತಿಯಿದೆ. ಅವರೆಲ್ಲರು ಸುರಕ್ಷಿತವಾಗಿ ಮರಳಲಿ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.