ಬೆಳಗಾವಿ: ನಗರದ ಕುಮಾರ – ಗಂಧವ೯ ಕಲಾ ಮಂದಿರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ, ಬೆಳಗಾವಿ ಇವರು ಸಂಯುಕ್ತ ಆಶ್ರಯದಲ್ಲಿ ಜರುಗಿದ ಶ್ರೀ ನಿಜ ಶರಣ ಅಂಬಿಗರ ಚೌಡಯ್ಯನವರ 905ನೇ ಜಯಂತಿ ಕಾಯ೯ಕ್ರಮವು, ಅದ್ದೂರಿಯಾಗಿ ಜರುಗಿತು.
ಈ ಕಾರ್ಯಕ್ರಮದಲ್ಲಿ ಬಸವರಾಜ ಫಕೀರಪ್ಪ ಸುಣಗಾರ ಅವರನ್ನು ಜಿಲ್ಲಾಡಳಿತ ಬೆಳಗಾವಿಯಿಂದ ಮಾನ್ಯ ಲೋಕೋಪಯೋಗಿ ಸಚಿವರು, ಕನಾ೯ಟಕ ಸಕಾ೯ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಲ. ಜಾರಕಿಹೊಳಿಯವರು, ಜಿಲ್ಲಾ ಅಧ್ಯಕ್ಷರು, ಬೆಳಗಾವಿ ಜಿಲ್ಲಾ ಕೋಳಿ ಬೆಸ್ತ ಸಮಾಜ ಸಂಘ,ಬೆಳಗಾವಿಯ ದಿಲೀಪಕುಮಾರ ಕುರಂದವಾಡೆ, ಇವರು ಬಸವರಾಜ ಫಕೀರಪ್ಪ ಸುಣಗಾರ ಅವರನ್ನು ಸನ್ಮಾನಿಸಿ ಗೌರವಿಸಿದರು.
ಈ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿಗಳು, ಮಹಾನಗರ ಸಭೆಯ ಆಯುಕ್ತರು, ಕನ್ನಡ ಸಂಸ್ಕೃತಿ ಇಲಾಖೆಯ ಉಪನಿರ್ದೇಶಕರು ಸೇರಿದಂತೆ ಹಿರಿಯ ಅಧಿಕಾರಿಗಳು, ಹಾಗೂ ಬೆಳಗಾವಿ ಜಿಲ್ಲೆಯ ಕೋಳಿ ಬೆಸ್ತ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಬಸವರಾಜ ಸುಣಗಾರ ಅವರಿಗೆ ನಮ್ಮೂರ ಧ್ವನಿ ಸುದ್ದಿ ವಾಹಿನಿಯ ಕಡೆಯಿಂದ ಹೃತ್ಪೂರ್ವಕ ಅಭಿನಂದನೆಗಳು 💐🌟🌹