ಬೆಳಗಾವಿ: ಜಿಲ್ಲಾ ಖಾಸಗಿ ವೈದ್ಯಕೀಯ ಸಂಸ್ಥೆಗಳ ನೊಂದಣಿ ಮತ್ತು ಕುಂದು ಕೊರತೆ ನಿವಾರಣಾ ಪ್ರಾಧಿಕಾರ ಬೆಳಗಾವಿ ಸಮಿತಿಗೆ ಅರ್ಹ ಮಹಿಳಾ ಪ್ರತಿನಿಧಿ ಸದಸ್ಯರನ್ನು ನೇಮಿಸಿಕೊಳ್ಳಲು ಆಸಕ್ತರಿಂದ
ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದಿನಾಂಕ:೧೦-೦೨-೨೦೨೫ ಅರ್ಜಿ ಸಲ್ಲಿಸಲು ಕೊನೆಯದಿನವಾಗಿರುತ್ತದೆ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಗೆ
ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಷರತ್ತುಗಳು: ಸಾಮಾಜಿಕ, ಶೈಕ್ಷಣಿಕ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಕನಿಷ್ಠ ೨೦ ವರ್ಷಗಳ ಸೇವೆ ಸಲ್ಲಿಸಿರಬೇಕು,
ಪದವಿಧರರಾಗಿರಬೇಕು, ಈಗಾಗಲೆ ಸದರಿ ಸಮಿತಿಯಲ್ಲಿ ಸೇವೆ ಸಲ್ಲಿಸಿದವರಿಗೆ ಆದ್ಯತೆ ನೀಡಲಾಗುವದಿಲ್ಲ, ೨
ವರ್ಷದ ಅವಧಿಗೆ ಮಾತ್ರ ಆಯ್ಕೆ ಮಾಡಿಕೊಳ್ಳಲಾಗುವುದು, ಅರ್ಜಿ ಸ್ವೀಕರಿಸಿದ ನಂತರ ಜಿಲ್ಲಾಧಿಕಾರಿಗಳು, ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು ಜಿ,ಪಂ ಮತ್ತು ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಇವರ ಸಮಿತಿಯ ಶಿಫಾರಸ್ಸು ಆಯ್ಕೆಯೇ ಅಂತಿಮವಾಗಿರುತ್ತದೆ.