ಬೆಳಗಾವಿ: ಇತ್ತೀಚಿಗೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದವು ಜರುಗಿಸಿದ ಏಕ ವಲಯ ಪುರುಷರ ಅಂತರ ಕಾಲೇಜು ದೇಹದಾಢ್ಯ ಸ್ಪರ್ಧೆಯ 60 ಕೆಜಿ ವಿಭಾಗದಲ್ಲಿ ಲಿಂಗರಾಜ ಕಾಲೇಜಿನ ವಿಶಾಲ ನಿಲಜಕರ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಕಾಲೇಜಿಗೆ ಕೀರ್ತಿಯನ್ನು ತಂದಿದ್ದಾನೆ.
ವಿದ್ಯಾರ್ಥಿ ಸಾಧನೆಗೆ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ ಕೋರೆಯವರು, ಪ್ರಾಚಾರ್ಯ ಡಾ.ಎಚ್.ಎಸ್.ಮೇಲಿನಮನಿ ಹಾಗೂ ದೈಹಿಕ ನಿರ್ದೇಶಕರಾದ ಡಾ.ಸಿ.ರಾಮರಾವ್ ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ವಿಶಾಲ ನಿಲಜಕರ ಅವರಿಗೆ ನಮ್ಮೂರ ಧ್ವನಿ ಸುದ್ದಿವಾಹಿನಿಯ ಕಡೆಯಿಂದ ಹೃತ್ಪೂರ್ವಕ ಅಭಿನಂದನೆಗಳು 💐😊