ಕುಕ್ಕೆ ಸುಬ್ರಹ್ಮಣ್ಯ: ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಬಾಲಿವುಡ್ ಖ್ಯಾತ ನಟಿ ಕತ್ರೀನಾ ಕೈಫ್ ರಾಜ್ಯದ ಪ್ರಸಿದ್ಧ ತೀರ್ಥಕ್ಷೇತ್ರ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಆಗಮಿಸಿದ್ದು,ಇಂದು ಮತ್ತು ನಾಳೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕತ್ರೀನಾ ಸರ್ಪಸಂಸ್ಕಾರ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ.
ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲೆ ಉಳಿದುಕೊಳ್ಳಲಿರುವ ಬಾಲಿವುಡ್ ನಟಿ ನಾಳೆ ಸರ್ಪ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ. ತಲೆಗೆ ದುಪ್ಪಟ್ಟ ಹಾಕಿ ದೇವರ ದರ್ಶನದಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ವರದಿಯಾಗಿದೆ. ಆದಿ ಸುಬ್ರಹ್ಮಣ್ಯದ ಸರ್ಪಸಂಸ್ಕಾರ ಯಾಗ ಶಾಲೆಯಲ್ಲಿ ಇಂದು ಮತ್ತು ನಾಳೆ ಸರ್ಪ ಸಂಸ್ಕಾರ ಸೇವೆಯನ್ನು ನಟಿ ಕತ್ರಿನಾ ಕೈಫ್ ನೆರವೇರಿಸಲಿದ್ದಾರೆ.
ವರದಿ:ಕಲ್ಲಪ್ಪ ಪಾಮನಾಯಿಕ್