Live Stream

[ytplayer id=’22727′]

| Latest Version 8.0.1 |

Local NewsState News

ಕಟ್ಟಡ ಕಾರ್ಮಿಕರಿಗಾಗಿ ಇರುವ “ 135 ಸಂಚಾರಿ ಆರೋಗ್ಯ ಘಟಕ” ಆ್ಯಂಬುಲೆನ್ಸ್ ವಾಹನ ಲೋಕಾರ್ಪಣೆ ಮಾಡಿದ ಮಾನ್ಯ ಮುಖ್ಯಮಂತ್ರಿಗಳು

ಕಟ್ಟಡ ಕಾರ್ಮಿಕರಿಗಾಗಿ ಇರುವ “ 135 ಸಂಚಾರಿ ಆರೋಗ್ಯ ಘಟಕ” ಆ್ಯಂಬುಲೆನ್ಸ್ ವಾಹನ ಲೋಕಾರ್ಪಣೆ ಮಾಡಿದ ಮಾನ್ಯ ಮುಖ್ಯಮಂತ್ರಿಗಳು

ಬೆಂಗಳೂರು: ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗಾಗಿಯೇ ಸಜ್ಜುಗೊಳಿಸಿರುವ 135 ಸಂಚಾರಿ ಆರೋಗ್ಯ ಘಟಕ ಆ್ಯಂಬುಲೆನ್ಸ್ ವಾಹನಗಳನ್ನು ಲೋಕಾರ್ಪಣೆಗೊಳಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮಾತನಾಡಿದರು.

ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ‌. ಸಮಾಜದಲ್ಲಿ ದುಡಿಯುವ ವರ್ಗ ಒಂದು ಕಡೆ ಇದ್ದರೆ, ದುಡಿಸಿಕೊಳ್ಳುವ ವರ್ಗ ಮತ್ತೊಂದು ಕಡೆ ಇರುತ್ತದೆ. ಯಾರು ಉತ್ಪಾದನಾ ಚಟುವಟಿಕೆಯಲ್ಲಿ ಭಾಗವಹಿಸುತ್ತಾರೋ ಅವರೇ ದೇಶ ನಿರ್ಮಾತೃಗಳು ಎಂದ ಹೇಳಿದರು.

ಇಡೀ ದೇಶ ನಮ್ಮ ಕಾರ್ಮಿಕರ ಶ್ರಮವನ್ನು ಅವಲಂಬಿಸಿದೆ‌. ಸಮಾಜದಲ್ಲಿ ಒಂದೇ ವರ್ಗದವರು ದುಡಿಯುತ್ತಿರಬಾರದು, ಎಲ್ಲ ವರ್ಗದವರೂ ದುಡಿಯಬೇಕು. ಆಗ ಮಾತ್ರ ಬುದ್ದ, ಬಸವ, ಅಂಬೇಡ್ಕರ್ ಆಶಯದ ಸಮ ಸಮಾಜ ನಿರ್ಮಾಣ ಸಾಧ್ಯ ಎಂದರು. ಸಚಿವ ಸಂತೋಷ್ ಲಾಡ್ ಅವರ ಕಾಳಜಿ ಮತ್ತು ಕರ್ತವ್ಯಪ್ರಜ್ಞೆಯಿಂದಾಗಿ ಉಚಿತ ಸಂಚಾರಿ ಆಸ್ಪತ್ರೆಗಳನ್ನು ಜಾರಿಗೊಳಿಸಲಾಗಿದೆ.

ಕಾರ್ಮಿಕರ ಸೆಸ್ ಹಣದಿಂದ ಕಾರ್ಮಿಕ ಕಲ್ಯಾಣ ಮಂಡಳಿ ಸುಸಜ್ಜಿತ ಸಂಚಾರಿ ಆಸ್ಪತ್ರೆಗಳನ್ನು ಲೋಕಾರ್ಪಣೆಗೊಳಿಸಲಾಗಿದೆ ಎಂದು ಅವರು ನುಡಿದರು. ಕಟ್ಟಡ ಮತ್ತು ಇತರೆ ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಕಾರಣದಿಂದ ಸರ್ಕಾರ ಕಾರ್ಮಿಕರ ಮಕ್ಕಳಿಗಾಗಿ ಉಚಿತ ಊಟ ಮತ್ತು ವಸತಿ ಶಾಲೆಗಳನ್ನು ತೆರೆಯಲಿದೆ ಎಂದು ಘೋಷಿಸಿದರು.
ಇವೆಲ್ಲಾ ಸವಲತ್ತುಗಳನ್ನು ಕಾರ್ಮಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ವರದಿ:ಕಲ್ಲಪ್ಪ ಪಾಮನಾಯಿಕ

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";