ಹುಕ್ಕೇರಿ: ತಾಲೂಕಿನ ಪಾಶ್ಚಾಪೂರ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಆಂತರಿಕ ಗುಣಮಟ್ಟ ಕೋಶ, ಅರ್ಥಶಾಸ್ತ್ರ ವಿಭಾಗ ಹಾಗೂ ಗ್ರಂಥಾಲಯ ವಿಜ್ಞಾನದ ಸಯುಕ್ತ ಆಶ್ರಯಗಳಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಗೋಕಾಕ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಅರ್ಥಶಾಸ್ತ್ರದ ಸಹಾಯಕ ಪ್ರಾಧ್ಯಾಪಕರಾದ ಪ್ರೊ. ವೀರಭದ್ರಪ್ಪ ತಿಳಗಂಜಿ ಅವರು ಅರ್ಥಶಾಸ್ತ್ರ ಹಾಗೂ ವಿಕಸಿತ ಭಾರತದ ಕುರಿತು ಹಾಗೂ ಅಭಿವೃದ್ಧಿಯತ್ತ ಸಾಗುತ್ತಿರುವ ಭಾರತ ದೇಶದ ಕುರಿತು ಸುವಿಸ್ತಾರವಾದ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ಗ್ರಂಥಾಲಯ ವಿಜ್ಞಾನ ವಿಭಾಗದ ಸಂಪನ್ಮೂಲ ವ್ಯಕ್ತಿಗಳಾದ ಪ್ರೊ.ಆರತಿ ಕಬ್ಬೂರಿ ಡಿಜಿಟಲ್ ಲೈಬ್ರರಿ ಯ ಕುರಿತು ವಿದ್ಯಾರ್ಥಿಗಳಿಗೆ ತಿಳಿಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಶ್ರೀಧರ್ ಕುಲಕರ್ಣಿ ಅವರು ವಹಿಸಿದ್ದರು.
ಈ ಸಂದರ್ಭದಲ್ಲಿ ಆಂತರಿಕ ಗುಣಮಟ್ಟ ಕೋಶದ ( IQAC) ಮುಖ್ಯಸ್ಥರಾದ ಪ್ರೊ.ಕಲ್ಪನಾ ಫೈನ್ಗುಣಿ ಮತ್ತು ದೈಹಿಕ ನಿರ್ದೇಶಕರಾದ ಪ್ರೊ.ಅಬ್ದುಲ್ ಲತೀಫ್ ನದಾಪ ಹಾಗೂ ಕಾಲೇಜಿನ ಎಲ್ಲಾ ಬೋಧಕ/ ಬೋಧಕೇತರ ಸಿಬ್ಬಂದಿ ವರ್ಗದವರು ವರ್ಗದವರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಶಕೀಬ್ ಅವರು ಸ್ವಾಗತಿಸಿದರು ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕರಾದ ರವಿ ಮೆಟಿಗೇರಿ ವಂದಿಸಿದರು.
ವರದಿ:ಎ. ವೈ. ಸೊನ್ಯಾಗೋಳ
ಸುದ್ದಿ ಹಾಗೂ ಜಾಹಿರಾತುಗಳಿಗಾಗಿ ಸಂಪರ್ಕಿಸಿ