ಧಾರವಾಡ: ಕನ್ನಡದ ಹಿರಿಯ ಸಾಹಿತಿ ಡಾ. ಪಂಚಾಕ್ಷರಿ ಹಿರೇಮಠ (92) ಅವರು ನಿಧನರಾಗಿದ್ದಾರೆ.
ಧಾರವಾಡದ ಜಯನಗರ ನಿವಾಸಿ ಹಾಗೂ ನಗರದ ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ನಿವೃತ್ತ ಪ್ರಾಧ್ಯಾಪಕರಾಗಿದ್ದ ಡಾ. ಪಂಚಾಕ್ಷರಿ ಹಿರೇಮಠ (92) ಶುಕ್ರವಾರ ಕೊನೆಯುಸಿರೆಳೆದಿದ್ದಾರೆ.
ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ.
ಹಿರೇಮಠರ ಅಂತ್ಯಕ್ರಿಯೆ ಮಾರ್ಚ್ 15 ರ ಇಂದು ಸಂಜೆ 4 ಗಂಟೆಗೆ ಕೊಪ್ಪಳ ಜಿಲ್ಲೆ ಬಿಸರಳ್ಳಿ ಗ್ರಾಮದಲ್ಲಿ ಜರುಗಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.