ಬೆಳಗಾವಿ: ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ, ಮಹಾನಗರ ಪಾಲಿಕೆಯ ವಿರೋಧ ಪಕ್ಷದ ಸದಸ್ಯರು ಕಚೇರಿ ಬಾಗಿಲು ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು.
ಎ ಖಾತಾ ಬಿ ಖಾತಾ ಮಾಡಿಕೊಡಲು ಕಂದಾಯ ಇಲಾಖೆ ಅಧಿಕಾರಿಗಳ ಹಣಕ್ಕೆ ಡಿಮ್ಯಾಂಡ್ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್‌ನ ಸದಸ್ಯರು ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿ ಧರಣಿ ನಡೆಸಿದರು. ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಹೋರಾಟ ನಡೆಸಿದರು.