ಗೋಕಾಕ: ತಾಲೂಕಿನ ಘಟಪ್ರಭಾ ಸಹಕಾರಿ ಕಾರ್ಖಾನೆ ಅಧ್ಯಕ್ಷ ಅಶೋಕ ಪಾಟೀಲ (67) ಅವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
ಮಾಜಿ ಸಚಿವ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತರಾಗಿದ್ದ ಅಶೋಕ ಪಾಟೀಲ ಕಳೆದ ಸುಮಾರು 20 ವರ್ಷಗಳಿಂದ ಘಟಪ್ರಭಾ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾಗಿದ್ದರು.
ಇಂದು ಅವರ ಅಂತ್ಯಕ್ರಿಯೆ ನಡೆಯಿತು. ಅಶೋಕ ಪಾಟೀಲ ನಿಧನಕ್ಕೆ ಬಾಲಚಂದ್ರ ಜಾರಕಿಹೊಳಿ, ರಮೇಶ ಜಾರಕಿಹೊಳಿ ಹಾಗೂ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.