ಬೆಳಗಾವಿ: ತಾಲ್ಲೂಕಿನ ಸಂತಿ ಬಸ್ತವಾಡ ಗ್ರಾಮದ ಮಸೀದಿಯಲ್ಲಿದ್ದ ಇಸ್ಲಾಂ ಧರ್ಮಗ್ರಂಥ ಕುರಾನ್ ಮತ್ತು ಹದೀಸ್‌ಅನ್ನು ಸೋಮವಾರ ಕಿಡಿಗೇಡಿಗಳು ಸುಟ್ಟು ಹಾಕಿದ್ದರ ಹಿನ್ನಲೆ ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿ, ಮುಸ್ಲಿಂ ಸಮಾಜದ ಯುವಕರು ರಾಣಿ ಚನ್ನಮ್ಮ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಮಾಡಿದರು.