ಹುಕ್ಕೇರಿ: ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಹೊಲಕ್ಕೆ ನೀರು ಹಾಯಿಸಲು ಹೋದಾಗ ಹಾವು ಕಚ್ಚಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಬುಧವಾರ ಮೃತಪಟ್ಟಿದ್ದಾರೆ.
ಗ್ರಾಮದ ಲಕ್ಷ್ಮೀದೇವಿ, ಮಲ್ಲಿಕಾರ್ಜುನ ದೇವಸ್ಥಾನ ಕಮಿಟಿ ಸದಸ್ಯ ಶ್ರೀಶೈಲ ಬಸವಣ್ಣಿ ಬಡಕುಂದ್ರಿ (68) ಮೃತರು. ಗಾಯಗೊಂಡಿದ್ದ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸ ಲಾಗಿತ್ತು.
ಯಮಕನಮರಡಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.