ಬೆಳಗಾವಿ: ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿಯಂತೆ, ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆ ಎಸಿಪಿ ಎಸ್.ಡಿ. ಸತ್ಯನಾಯ ಅವರ ನೇತೃತ್ವದಲ್ಲಿ ವಿಶೇಷ ದಾಳಿ ನಡೆಸಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ.
ಬಂಧಿತರನ್ನು ಯುನುಸ ದಸ್ತಗಿರಸಾಬ ಸನದಿ ಮತ್ತು ಮುಶೈಬ ಜರಾರಹ್ಮದ ಪಟೇಲ್ ಎಂದು ಗುರುತಿಸಲಾಗಿದೆ. ತನಿಖೆಯ ವೇಳೆ ಈ ಇಬ್ಬರೂ ಆರೋಪಿಗಳು ತಮ್ಮ ಲಾಭಕ್ಕಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಒಪ್ಪಿಕೊಂಡಿದ್ದಾರೆ.
ಪೊಲೀಸರು ಇವರಿಂದ 48.22 ಗ್ರಾಂ ಹೆರಾಯಿನ್ (ಅಂದಾಜು ಮೌಲ್ಯ ರೂ. 40,000/-) ಹಾಗೂ ಆರೋಪಿಗಳು ಕೃತ್ಯಕ್ಕೆ ಬಳಸಿದ ಸುಮಾರು ರೂ. 40,000/- ಮೌಲ್ಯದ ಒಂದು ಮೋಟಾರ್ ಸೈಕಲ್‌ನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದೆ.
ವರದಿ: ಚೇತನ ಡಿ.ಕೆ
ನಮ್ಮೂರ ಧ್ವನಿ ನ್ಯೂಸ್
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ
+91 95905 51177