ಖಾನಾಪುರ: ತಾಲೂಕಿನ ಕಣಕುಂಬಿ ಚೆಕ್ ಪೋಸ್ಟ್ ಬಳಿ ಬುಧವಾರ ಬೆಳಗಿನ ಜಾವ ಒಂದು ಭೀಕರ ಘಟನೆ ನಡೆದಿದೆ. ಅರಣ್ಯದಲ್ಲಿ ದನ ಮೇಯಿಸಲು ಹೋದ ಸ್ಥಳೀಯ ರೈತನೊಬ್ಬನ ಮೇಲೆ ಕರಡಿಯೊಂದು ದಾಳಿ ನಡೆಸಿದ್ದು, ವ್ಯಕ್ತಿಗೆ ಗಂಭೀರ ಗಾಯವಾಗಿದೆ.
ದಶರಥ ವರಂಡಿಕರ (60) ಎಂಬವರು ತಮ್ಮ ದನಗಳನ್ನು ಅರಣ್ಯ ಪ್ರದೇಶದ ಅಂಚಿನಲ್ಲಿ ಮೇಯಲು ಬಿಟ್ಟಿದ್ದರು. ಮನೆಗೆ ಹಿಂತಿರುಗುವ ವೇಳೆಗೆ ಏಕಾಏಕಿ ಕರಡಿಯೊಂದು ದಾಳಿ ಮಾಡಿ ಅವರ ಮುಖವನ್ನು ಚೀರಿ ಹಾಕಿದೆ ಎನ್ನಲಾಗಿದೆ. ಪರಿಣಾಮವಾಗಿ ಅವರು ತೀವ್ರವಾಗಿ ಗಾಯಗೊಂಡಿದ್ದು, ತಕ್ಷಣವೇ ಬೆಳಗಾವಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.
ಘಟನೆಯ ಮಾಹಿತಿಯನ್ನಿಟ್ಟುಕೊಂಡು ಸ್ಥಳಕ್ಕೆ ಖಾನಾಪುರ ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಅರಣ್ಯ ಪ್ರದೇಶದ ನಿವಾಸಿಗಳಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಿದ್ದು, ಸ್ಥಳೀಯರು ಹೆಚ್ಚಿನ ಭದ್ರತೆ ಕಲ್ಪಿಸುವಂತೆ ಆಗ್ರಹಿಸಿದ್ದಾರೆ.
ಅರಣ್ಯ ಇಲಾಖೆ ಪ್ರತಿಕ್ರಿಯೆ:
“ಪಶುಗಳು ಅರಣ್ಯ ವ್ಯಾಪ್ತಿಯಿಂದ ಹೊರಗೆ ಬಾರದಂತೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ಜನರ ಜೀವಕ್ಕೆ ಅಪಾಯವಾಗದಂತೆ ಸೂಕ್ತ ನಿಗಾ ಇರಿಸಲಾಗುವುದು,” ಎಂದು ಅರಣ್ಯಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಸಾಮಾನ್ಯರ ಆತಂಕ:
ಕಣಕುಂಬಿ ಸುತ್ತಮುತ್ತ ಅರಣ್ಯ ಪ್ರದೇಶದಲ್ಲಿ ಈತರೆ ಕಾಡುಪ್ರಾಣಿಗಳ ಸಂಚಲನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಸ್ಥಳೀಯರು ಆತಂಕದಲ್ಲಿದ್ದಾರೆ. ಅಧಿಕಾರಿಗಳು ತ್ವರಿತ ಕ್ರಮ ಕೈಗೊಂಡು ಜಾನುವಾರು ಹಾಗೂ ಜನರ ಸುರಕ್ಷತೆಯ ಬಗ್ಗೆ ಗಮನ ಹರಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ವರದಿ: ಚೇತನ ಡಿ.ಕೆ
ನಮ್ಮೂರ ಧ್ವನಿ ನ್ಯೂಸ್
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ
+91 95905 51177