ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಜೂನ್ 26 ರಂದು ಅಂತಾರಾಷ್ಟ್ರೀಯ ಮಾದಕ ವಸ್ತು ಮತ್ತು ಆಕ್ರಮ ಸಾಗಾಣಿಕೆ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಭಾವಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳು ವಹಿಸಿದ್ದರು. ಅವರು ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಮಾತನಾಡುತ್ತಾ, “ಡ್ರಗ್ಸ್ ಸೇವನೆಯಿಂದ ಅನೇಕ ವಿದ್ಯಾರ್ಥಿಗಳು ದೈಹಿಕ ಹಾಗೂ ಮಾನಸಿಕ ಕಾಯಿಲೆಗೆ ಒಳಗಾಗಿ ತಮ್ಮ ಭವಿಷ್ಯವನ್ನೇ ನಾಶ ಮಾಡಿಕೊಂಡಿದ್ದಾರೆ. ಇದು ಕುಟುಂಬ ಹಾಗೂ ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಯುವಜನತೆ ಇಂತಹ ದುಶ್ಚಟಗಳಿಂದ ದೂರವಿರಬೇಕು” ಎಂದು ಕಿವಿಮಾತು ನೀಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿ, ವಿಶ್ವವಿದ್ಯಾಲಯದ ಕುಲಸಚಿವರಾದ ಶ್ರೀ ಸಂತೋಷ ಕಾಮಗೌಡ, ಕೆ.ಎ.ಎಸ್., ಅವರು ಮಾತನಾಡುತ್ತಾ, “ಪ್ರತಿಯೊಂದು ವರ್ಷದ ಜೂನ್ 26ರಂದು ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಹಾಗೂ ಕಾನೂನು ಬಾಹಿರ ಸಾಗಾಣಿಕೆ ವಿರೋಧಿ ದಿನವನ್ನು ಆಚರಿಸಲಾಗುತ್ತದೆ. ಈ ಮೂಲಕ ಜಾಗತಿಕವಾಗಿ ಈ ಸಮಸ್ಯೆಗಳ ಕುರಿತು ಅರಿವು ಮೂಡಿಸಲು ಪ್ರಯತ್ನಿಸಲಾಗುತ್ತದೆ. ಇಂದು ಮಕ್ಕಳು, ಯುವಕರು ಡ್ರಗ್ ಮಾಫಿಯಾದ ಬಲೆಗೆ ಬಿದ್ದಿದ್ದಾರೆ. ಇದು ಕೇವಲ ಕಾನೂನಿನ ವಿಷಯವಲ್ಲ – ಸಮಾಜದ ನೈತಿಕ ಜವಾಬ್ದಾರಿಯೂ ಹೌದು. ಪ್ರತಿಯೊಬ್ಬರೂ ಮಾದಕ ವಸ್ತುಗಳ ವಿರುದ್ಧ ಹೋರಾಡಬೇಕು,” ಎಂದು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಎಲ್ಲ ವಿದ್ಯಾರ್ಥಿಗಳು ಮಾದಕ ವಸ್ತುಗಳ ಬಳಕೆ ವಿರೋಧಿಸಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದವರು:
- ಪ್ರೊ. ಡಿ. ಎನ್. ಪಾಟೀಲ – ಮೌಲ್ಯಮಾಪನ ಕುಲಸಚಿವ
- ಪ್ರೊ. ವಾಯ್. ಎಸ್. ಬಲವಂತಗೊಳ – ವಿದ್ಯಾರ್ಥಿ ಕಲ್ಯಾಣ ನಿರ್ದೇಶಕರು
- ಪ್ರೊ. ಎಸ್. ಸಿ. ಪಾಟೀಲ – ಸ್ನಾತಕೋತ್ತರ ವಿಭಾಗ ನಿರ್ದೇಶಕರು
- ವಿವಿಧ ನಿಖಾಯಗಳ ಡೀನರು
- ಬೋಧಕ, ಬೋಧಕೇತರ ಸಿಬ್ಬಂದಿ
- ಸಂಶೋಧನಾ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು
ಡಾ. ಪ್ರಕಾಶ ಕಟ್ಟಿಮನಿ ಅವರು ಕಾರ್ಯಕ್ರಮದ ಸ್ವಾಗತ ಹಾಗೂ ನಿರೂಪಣೆಗೈದು, ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಿದರು.
ವರದಿ: ಚೇತನ ಡಿ.ಕೆ
ನಮ್ಮೂರ ಧ್ವನಿ ನ್ಯೂಸ್
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ
+91 9164577143