ಯರಗಟ್ಟಿ: ಬಗರನಾಳ ಗ್ರಾಮದ ಹೆಸ್ಕಾಂ ಸಿಬ್ಬಂದಿ ಮಾರುತಿ ಅವಲಿ (25) ಅವರು ವಿದ್ಯುತ್ ತಗುಲಿ ದುರಂತವಾಗಿ ಸಾವಿಗೀಡಾದ ಘಟನೆ ಸಮೀಪದ ಮುಗಳಿಹಾಳ ಗ್ರಾಮದಲ್ಲಿ ನಡೆದಿದೆ. ವಿದ್ಯುತ್ ಕಂಬದ ಮೇಲೆ ಹತ್ತಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದ್ದು, ಮೂರು ಗಂಟೆಗಳ ಕಾಲ ಮೃತದೇಹ ಕಂಬದ ಮೇಲೆ ನೇತಾಡುತ್ತಿದ್ದರೂ ಹೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಆಗಮಿಸದಿರುವುದರಿಂದ ಗ್ರಾಮಸ್ಥರಲ್ಲಿ ತೀವ್ರ ಆಕ್ರೋಶ ಉಂಟಾಗಿದೆ.
ಘಟನೆ ವಿವರಗಳ ಪ್ರಕಾರ, ಮಾರುತಿ ಅವಲಿ ಅವರು ಮುಗಳಿಹಾಳ ಗ್ರಾಮದಲ್ಲಿ ವಿದ್ಯುತ್ ಕಂಬದ ಮೇಲಿಂದ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಎಚ್ಚರಿಕೆಯಿಂದ ಇಲ್ಲದೇ ವಿದ್ಯುತ್ ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ನಡೆದ ಬಳಿಕ ಸುಮಾರು ಮೂರು ಗಂಟೆಗಳ ಕಾಲ ಮೃತದೇಹ ವಿದ್ಯುತ್ ಕಂಬದ ಮೇಲೆಯೇ ನೇತಾಡುತ್ತಿದ್ದು, ಸಹೋದ್ಯೋಗಿಗಳು ಅಥವಾ ಅಧಿಕಾರಿಗಳಿಂದ ಯಾವುದೇ ಸಹಾಯವೂ ಲಭ್ಯವಾಗಲಿಲ್ಲ ಎಂಬ ಆರೋಪ ಕೇಳಿಬಂದಿದೆ.
ಸ್ಥಳೀಯರು ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ವಿರುದ್ಧ ಗಂಭೀರ ಆಕ್ರೋಶ ವ್ಯಕ್ತಪಡಿಸಿದ್ದು, ದುರಂತದ ಬಳಿಕವೂ ಕ್ರಮ ಕೈಗೊಳ್ಳದಿರುವ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಈ ಘಟನೆ ಸಂಬಂಧ ತನಿಖೆ ಮುಂದುವರಿದಿದ್ದು, ವಿದ್ಯುತ್ ಇಲಾಖೆಯಲ್ಲಿನ ಸುರಕ್ಷತಾ ಕ್ರಮಗಳ ಬಗ್ಗೆ ಮತ್ತೊಮ್ಮೆ ಪ್ರಶ್ನೆ ಎದ್ದಿದೆ.
ವರದಿ: ಚೇತನ ಡಿ.ಕೆ
ನಮ್ಮೂರ ಧ್ವನಿ ನ್ಯೂಸ್
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ
+91 9164577143