ಬೆಳಗಾವಿ: ಪತ್ರಿಕಾ ದಿನಾಚರಣೆಯ ಅಂಗವಾಗಿ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮಿಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ (ರಿ) ವತಿಯಿಂದ ಜಿಲ್ಲೆಯ ಪೊಲೀಸ್ ಮೈದಾನದಲ್ಲಿ ಆಯೋಜಿಸಲಾಗಿದ್ದ ‘ಮಿಡಿಯಾ ಕಪ್’ ಕ್ರಿಕೆಟ್ ಪಂದ್ಯಾವಳಿಗೆ ಯುವ ಕಾಂಗ್ರೆಸ್ ನಾಯಕ ಮೃಣಾಲ್ ಹೆಬ್ಬಾಳಕರ್ ಅವರು ಆಗಮಿಸಿ ಪಾಲ್ಗೊಂಡು ಕ್ರಿಕೆಟ್ ಆಟಗಾರರಿಗೆ ಹಾರೈಕೆ ಕೋರಿದರು.
ಪತ್ರಕರ್ತರ ಸಹಭಾಗಿತ್ವದಲ್ಲಿ ಜರುಗಿದ ಈ ಕ್ರಿಕೆಟ್ ಪಂದ್ಯಾವಳಿ ಉತ್ಸಾಹಭರಿತ ವಾತಾವರಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಹಾಗೂ ಮಿಡಿಯಾ ಅಸೋಸಿಯೇಷನ್‌ನ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪತ್ರಿಕೋದ್ಯಮಿಗಳಿಗೆ ಮಾನ್ಯತೆ ನೀಡಲು ಹಾಗೂ ಕ್ರೀಡಾ ಚಟುವಟಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಈ ಪಂದ್ಯಾವಳಿ ಆಯೋಜನೆಯಾಗಿದ್ದು, ವಿವಿಧ ತಂಡಗಳು ಸ್ಪರ್ಧಾತ್ಮಕ ಮನೋಭಾವದೊಂದಿಗೆ ಪಾಲ್ಗೊಂಡವು.
ವರದಿ: ಚೇತನ ಡಿ.ಕೆ
ನಮ್ಮೂರ ಧ್ವನಿ ನ್ಯೂಸ್
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ
+91 9164577143