ನಿಪ್ಪಾಣಿ: ನಿಪ್ಪಾಣಿ ತಾಲೂಕಿಗೆ ಮೌಲಾನಾ ಆಜಾದ್ ಮಾದರಿ ಶಾಲೆಯು ಮಂಜೂರಾಗಿದ್ದು, ಈ ಶೈಕ್ಷಣಿಕ ವರ್ಷದಿಂದಲೇ ಕಾರ್ಯಾರಂಭ ಮಾಡಲಿದೆ ಎಂದು ಮಾಜಿ ಸಚಿವೆ ಹಾಗೂ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಸಂತಸ ವ್ಯಕ್ತಪಡಿಸಿದ್ದಾರೆ. ಈ ಶಾಲೆಯು ತಾಲೂಕಿನ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಅತ್ಯುತ್ತಮ ಮೂಲಭೂತ ಸೌಲಭ್ಯಗಳನ್ನು ಒದಗಿಸಲಿದೆ ಎಂದು ಅವರು ತಿಳಿಸಿದ್ದಾರೆ.
ಯಾವುದೇ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ತಮ್ಮ ಆಶಯದಂತೆ ಈ ಶಾಲೆ ಪ್ರಾರಂಭಿಸಲಾಗುತ್ತಿದೆ ಎಂದು ಶಾಸಕಿ ಜೊಲ್ಲೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಶಾಲೆ ಪ್ರಾರಂಭಿಸಲು ಸಹಕರಿಸಿದ ಸರ್ಕಾರ ಹಾಗೂ ಹಿರಿಯ ನಾಯಕರಿಗೆ ಅವರು ಧನ್ಯವಾದ ಸಲ್ಲಿಸಿದ್ದಾರೆ.
ಈ ಮೌಲಾನಾ ಆಜಾದ್ ಮಾದರಿ ಶಾಲೆಯು ನಿಪ್ಪಾಣಿ ತಾಲೂಕಿನ ಶೈಕ್ಷಣಿಕ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಲಿದೆ ಎಂದು ನಿರೀಕ್ಷಿಸಲಾಗಿದೆ.
ವರದಿ: ಚೇತನ ಡಿ.ಕೆ
ನಮ್ಮೂರ ಧ್ವನಿ ನ್ಯೂಸ್
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ
+91 9164577143