ಬೆಳಗಾವಿ: ವಿಹಾನ್ ಸಂಸ್ಥೆ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆಯ ಶಕ್ತಿ ಸದನ ಯೋಜನೆ ಮೂಲಕ ಮಾನವ ಕಳ್ಳ ಸಾಗಾಣಿಕೆ ದಿನಾಚರಣೆ ಅಂಗವಾಗಿ ಅನೈತಿಕ ಸಾಗಾಣಿಕೆ ಕುರಿತು ಜಾಗೃತಿ ಮೂಡಿಸಲು ಪ್ರೌಢಶಾಲೆ ಮತ್ತು ಕಾಲೇಜ್ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆಯನ್ನು ರವಿವಾರ ದಿನಾಂಕ 27 ರಂದು ನಗರದ ದೇವರಾಜ ಅರಸ್ ಬಡಾವಣೆಯ ಶಕ್ತಿ ಸದನ ಕೇಂದ್ರದಲ್ಲಿ ಆಯೋಜಿಸಲಾಗಿದೆ .
ಚಿತ್ರಕಲಾ ಸ್ಪರ್ಧೆಯ ವಿಷಯ ಮಾನವ ಕಳ್ಳ ಸಾಗಾಣಿಕೆ, ಬಾಲ್ಯ ವಿವಾಹ, ಬಲವಂತದ ದುಡಿಮೆ ಇತ್ಯಾದಿ. ಆಸಕ್ತರು ದಿನಾಂಕ 25 ರ ಒಳಗಾಗಿ ತಮ್ಮ ಹೆಸರನ್ನು ನೋಂದಾಯಿಸಬಹುದು. ಭಾಗವಹಿಸುವ ಪ್ರತಿಯೊಬ್ಬರಿಗೂ ಪ್ರಮಾಣ ಪತ್ರ ಮತ್ತು ವಿಜೇತರಿಗೆ ಬಹುಮಾನ ವಿತರಿಸಲಾಗುವುದು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 9590551177
ವರದಿ: ಚೇತನ ಡಿ.ಕೆ
ನಮ್ಮೂರ ಧ್ವನಿ ನ್ಯೂಸ್
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ
+91 9164577143