ಬೆಂಗಳೂರು: ನಗರದ ಕೆ.ಪಿ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಂದೆ, ತಾಯಿ, ಮಗು ಮೂರು ಜನ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಇದೀಗ ಮಗು ಸಾವನ್ನಪ್ಪಿದೆ ಎಂದು ವರದಿಯಾಗಿದೆ.
ಚಿಕ್ಕವರಿಂದ ದೊಡ್ಡವರವರೆಗೂ ಕೇಕ್ ಅಂದ್ರೆ ಬಲು ಇಷ್ಟ. ಆದ್ರೆ ಇತ್ತೀಚೆಗೆ ಕೇಕ್ ತಿಂದ್ರೆ ಗಂಭೀರ ಆರೋಗ್ಯ ಸಮಸ್ಯೆ ಕಾಡುತ್ತೆ ಅನ್ನೋ ಬಗ್ಗೆ ಶಾಕಿಂಗ್ ವರದಿಯೊಂದು ಹೊರಬಿದ್ದಿತ್ತು. ಇದೀಗ ಕೇಕ್ ತಿಂದು ಒಂದೇ ಕುಟುಂಬದ ಮೂರು ಜನ ಅಸ್ವಸ್ಥರಾಗಿರುವ ಆರೋಪ ಕೇಳಿಬಂದಿತ್ತು.
ಒಂದೇ ಕುಟುಂಬದ ಮೂವರು ಅಸ್ವಸ್ಥರಾಗಿದ್ದು, ತಂದೆ ಬಾಲರಾಜ್, ತಾಯಿ ನಾಗಲಕ್ಷ್ಮಿ ಮತ್ತು ಮಗ ಧೀರಜ್ (5) ಜೊತೆ ಸೇರಿ ಕೇಕ್ ತಿಂದಿದ್ದರು. ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದ ವ್ಯಕ್ತಿ, ಮನೆಗೆ ಕೇಕ್ ತೆಗೆದುಕೊಂಡು ಬಂದಿದ್ದರು ಎನ್ನಲಾಗಿದೆ. ಕೇಕ್ ತಂದು ಮೂವರು ಒಟ್ಟಿಗೆ ತಿಂದ ನಂತರ ಮೂವರ ಆರೋಗ್ಯದಲ್ಲಿ ಅಸ್ಥವ್ಯಸ್ಥವಾಗಿದೆ. ತಕ್ಷಣ ಮೂವರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು ಎನ್ನಲಾಗಿದೆ. ಆದರೆ ಇದೀಗ ಪುಡ್ ಪಾಯ್ಸನ್ ನಿಂದ ಮಗ ಧೀರಜ್ (5) ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.
ಕೆಪಿ ಅಗ್ರಹಾರ ಠಾಣೆ ಪೊಲೀಸರು ಈ ಘಟನೆ ಬಗ್ಗೆ ಮಾಹಿತಿ ಕಲೆ ಕಲೆ ಹಾಕುತ್ತಿದ್ದು, ಕೇಕ್ ತಂದಿದ್ದು ಯಾವ ಬೇಕರಿಯಿಂದ? ಕೇಕ್ ನಲ್ಲಿರೋ ಅಂಶಗಳಿಂದ ಅಸ್ವಸ್ಥರಾಗಿದ್ದಾರಾ? ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಗ ಈಗಾಗಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದ್ದು, ಇನ್ನಿಬ್ಬರಿಗೆ ಕಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ವೈದ್ಯರ ರಿಪೋರ್ಟ್ ಗಾಗಿ ಪೊಲೀಸರು ಕಾಯ್ತಾ ಇದ್ದಾರೆ.