Live Stream

[ytplayer id=’22727′]

| Latest Version 8.0.1 |

Local NewsState News

ಬೆಳಗಾವಿ: ಕೆಎಲ್‌ಇ ಆಸ್ಪತ್ರೆ ಬಳಿ ಕಾರಿನ ಮೇಲೆ ಬಿದ್ದ ಸಿಮೆಂಟ್ ಮಿಕ್ಸರ್ ಲಾರಿ…!

ಬೆಳಗಾವಿ: ಕೆಎಲ್‌ಇ ಆಸ್ಪತ್ರೆ ಬಳಿ ಕಾರಿನ ಮೇಲೆ ಬಿದ್ದ ಸಿಮೆಂಟ್ ಮಿಕ್ಸರ್ ಲಾರಿ…!

 

ಬೆಳಗಾವಿ: ನಗರದ ಕೆಎಲ್‌ಇ ಆಸ್ಪತ್ರೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ (ಮಾ.15) ಚಲಿಸುತ್ತಿದ್ದ ಕಾರಿನ ಮೇಲೆ ಕಾಂಕ್ರಿಟ್ ಮಿಕ್ಸರ್ ಲಾರಿ ಬಿದ್ದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪವಾಡಸದೃಶವಾಗಿ ಪಾರಾದ ಘಟನೆ ಸಂಭವಿಸಿದೆ.

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊರಟಿದ್ದ ಕಾರಿನ ಮೇಲೆ ಸಿಮೆಂಟ್ ಮಿಕ್ಸರ್ ಲಾರಿ ಏಕಾಏಕಿ ಬಿದ್ದಿದೆ. ಲಾರಿ ಬಿದ್ದ ರಭಸಕ್ಕೆ ಕಾರು ಸಂಪೂರ್ಣ ಅಪ್ಪಚ್ಚಿಯಾಗಿದೆ. ಕಾರಿನಲ್ಲಿದ್ದ ಇಬ್ಬರು ‘ಕಾಪಾಡಿ…ಕಾಪಾಡಿ’ ಎಂದು ಗೋಗರೆಯುತ್ತಿದ್ದರು. ಕೂಡಲೇ ಸ್ಥಳೀಯರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಈ ಇಬ್ಬರನ್ನೂ ಹೊರಗೆ ತೆಗೆದು ಆಸ್ಪತ್ರೆಗೆ ಸಾಗಿಸಿದ್ದಾರೆ.

ಲಾರಿ ಬೀಳುತ್ತಿದ್ದಂತೆ ಕಾರು ಸಂಪೂರ್ಣವಾಗಿ ಅದರ ಕೆಳಗೆ ಸಿಲುಕಿಕೊಂಡಿತ್ತು. ಕಾರಿನಲ್ಲಿದ್ದವರು ಒಳಗೆ ಸಿಕ್ಕಿ ಹಾಕಿಕೊಂಡು ಒದ್ದಾಡುತ್ತಿದ್ದರು. ಸ್ಥಳಕ್ಕೆ ಎರಡು ಕ್ರೇನ್‌ಗಳನ್ನು ತರಲಾಯಿತು. ನಂತರ ಲಾರಿ ಮೇಲಕ್ಕೆತ್ತಿ, ಕಾರಿನೊಳಗೆ ಸಿಲುಕಿದ್ದವರನ್ನು ಒಬ್ಬೊಬ್ಬರನ್ನಾಗಿ ಹೊರಗೆ ತೆಗೆದು ಆಸ್ಪತ್ರೆಗೆ ದಾಖಲಿಸಲಾಯಿತು. ಲಾರಿ ಚಾಲಕ ಹಾಗೂ ಸಹಾಯಕನನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";