ಬೆಳಗಾವಿ: ದಕ್ಷಿಣ ಮಹಾರಾಷ್ಟ್ರ ಶಿಕ್ಷಣ ಮಂಡಳಿಯ ಜ್ಯೋತಿ ಸೆಂಟ್ರಲ್ ಸಿಬಿಎಸ್‌ಇ ಶಾಲೆಯಲ್ಲಿ 10ನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗಾಗಿ ಸನ್ಮಾನ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿ.ಎಸ್.ಎಸ್. ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಎಸ್.ಬಿ. ಕುಲಕರ್ಣಿ ಅವರು ಪಾಲ್ಗೊಂಡು ಮಾತನಾಡಿ, “ಪೋಷಕರು ತಮ್ಮ ಮಕ್ಕಳ ಆಸಕ್ತಿ ಹಾಗೂ ಸಾಮರ್ಥ್ಯವನ್ನು ಗುರುತಿಸಿ, ಅವರ ಆಸಕ್ತಿಯ ಕ್ಷೇತ್ರದಲ್ಲೇ ಪ್ರೋತ್ಸಾಹಿಸಬೇಕು. ವಿದ್ಯಾರ್ಥಿಗಳ ಮೇಲೆ ಆಕಾಂಕ್ಷೆಗಳ ಒತ್ತಡ ನೀಡದೆ, ಅವರು ಆಯ್ದ ಕ್ಷೇತ್ರದಲ್ಲಿ ಸಾಧನೆ ಮಾಡಲು ಅವಕಾಶ ನೀಡುವುದು ಅಗತ್ಯ” ಎಂದು ಸಲಹೆ ನೀಡಿದರು.
ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಕಾರ್ಯಕ್ರಮದಲ್ಲಿ ಉತ್ಸಾಹಭರಿತವಾಗಿ ಭಾಗವಹಿಸಿದ್ದರು. ಶಾಲೆಯ ಸಾಧನೆಯು ಹಾಗೂ ವಿದ್ಯಾರ್ಥಿಗಳ ಶ್ರಮಕ್ಕೆ ಗೌರವ ಸೂಚಿಸುವ ಈ ಕಾರ್ಯಕ್ರಮ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.
ಈ ಕಾರ್ಯಕ್ರಮದಲ್ಲಿ ಶಾಲೆಯ ಸಂಸ್ಥಾಪಕ ಮತ್ತು ಮಾಜಿ ಅಧ್ಯಕ್ಷ ಡಾ. ಪಿ.ಡಿ. ಕಾಳೆ, ಜ್ಯೋತಿ ಪಿ.ಯು. ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಹಾಗೂ ಎಸ್‌ಎಂಸಿ ಅಧ್ಯಕ್ಷ ಪ್ರೊ. ಆರ್.ಕೆ. ಪಾಟೀಲ್, ಉಪಾಧ್ಯಕ್ಷ ಪ್ರೊ. ಆರ್.ಎಸ್. ಪಾಟೀಲ್, ಕಾರ್ಯದರ್ಶಿ ಪ್ರೊ. ನಿತಿನ್ ಘೋರ್ಪಡೆ, ಶಾಲಾ ಸಲಹಾ ನಿರ್ದೇಶಕಿ ಶ್ರೀಮತಿ ಮಾಯಾದೇವಿ ಅಗಸ್ಗೇಕರ್ ಹಾಗೂ ಪ್ರಾಂಶುಪಾಲರಾದ ಶ್ರೀಮತಿ ಸೋನಾಲಿ ಕಂಗ್ರಾಳ್ಕರ್ ಉಪಸ್ಥಿತರಿದ್ದರು.