ಮೂಡಲಗಿ : ದಿನಾಂಕ 17.01.2025ರಂದು ಮೂಡಲಗಿಯ ಮೇಘ ಕಾನ್ವೆಂಟ್ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಹುಕ್ಕೇರಿ ತಾಲೂಕಿನ ಗುಡಸ ಗ್ರಾಮದ ಶ್ರೀ ಬಸವೇಶ್ವರ ಆದರ್ಶ ಕನ್ನಡ ಮಾಧ್ಯಮ ಅನುದಾನಿತ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಯಾದ ಭೀಮ ಗೌಡ ಬಡಿಗೇರ ಕ್ಲೇ ಮಾಡ್ಲಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾನೆ. ಈ ವಿದ್ಯಾರ್ಥಿಯನ್ನು ಸಂಸ್ಥೆಯ ಅಧ್ಯಕ್ಷರು, ಮತ್ತು ಪದಾಧಿಕಾರಿಗಳು, ಎಸ್ ಡಿ ಎಂ ಸಿ ಸದಸ್ಯರು, ಮುಖ್ಯೋಪಾಧ್ಯಾಯರು ಮತ್ತು ಸಿಬ್ಬಂದಿ ವರ್ಗ ಹಾಗೂ ಸರ್ವ ಪಾಲಕವೃoದದವರು ಅಭಿನಂದಿಸಿದ್ದಾರೆ.
ಕುಮಾರ ಭೀಮಗೌಡ ಬಡಿಗೇರ ಅವರಿಗೆ ನಮ್ಮೂರ ಧ್ವನಿ ಸುದ್ದಿ ವಾಹಿನಿಯ ಕಡೆಯಿಂದ ಹೃತ್ಪೂರ್ವಕ ಅಭಿನಂದನೆಗಳು👏🎉🎊