ಹುಕ್ಕೇರಿ: ಇತ್ತೀಚಿನ ದಿನಗಳಲ್ಲಿ ಆಧುನಿಕತೆಯ ಹೆಸರಿನಲ್ಲಿ ನಾವು ಪಾರಂಪರಿಕ ಆಹಾರ ಪದ್ಧತಿಗಳನ್ನು ಮರೆತು, ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವದಿಂದ ವಿವಿಧ ರೋಗಗಳಿಗೆ ಒಳಗಾಗುತ್ತಿದ್ದೇವೆ. ಉತ್ತಮ ಆಹಾರ ಸೇವನೆ, ನಿಯಮಿತ ವ್ಯಾಯಾಮ ಹಾಗೂ ದುಶ್ಚಟಗಳಿಂದ ದೂರವಿರುವುದು ಆರೋಗ್ಯಕರ ಜೀವನ ಶೈಲಿಗೆ ಆಧಾರ ಎಂದು ಜೆ.ಜೆ.ಕೊ. ಆಯುರ್ವೇದ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಡಾ. ಕೀರ್ತಿ ಚೌಗಲಾ ಅಭಿಪ್ರಾಯಪಟ್ಟರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಹಾಗೂ ನಮ್ಮೂರ ಬಾನುಲಿ ಸಮೂಹ ರೇಡಿಯೋ ಕೇಂದ್ರದ ಸಹಯೋಗದಲ್ಲಿ “ಸ್ವಾಸ್ಥ್ಯ ಸಂಕಲ್ಪ – ಕಿಶೋರಿಯರ ಆರೋಗ್ಯ ಜಾಗೃತಿ” ಕಾರ್ಯಕ್ರಮವನ್ನು ಹುಕ್ಕೇರಿ ತಾಲೂಕಿನ ಯರಗಟ್ಟಿಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಡಾ. ಕೀರ್ತಿ ಚೌಗಲಾ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.
“ಆರೋಗ್ಯವೇ ಸಂಪತ್ತು” ಎಂಬ ಮಾತು ಅತ್ಯಂತ ಸತ್ಯ. ನಿರಂತರ ಒತ್ತಡದ ಬದುಕಿನಲ್ಲಿ ಆರೋಗ್ಯದ ಕಡೆ ಗಮನ ಹರಿಸುವುದು ಅತ್ಯಗತ್ಯ,” ಎಂದು ಅವರು ಹೇಳಿದರು. ತಮ್ಮ ಭಾಷಣದಲ್ಲಿ ವ್ಯಕ್ತಿಗತ ಶುದ್ಧತೆ, ಮenses ಸಮಯದ ಆರೋಗ್ಯ, ಪೌಷ್ಟಿಕ ಆಹಾರ, ಸಾಮಾಜಿಕ ಸಂಬಂಧಗಳು ಹಾಗೂ ಸಾಮಾಜಿಕ ಮಾಧ್ಯಮಗಳ ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದ ಪ್ರಾಸ್ತಾವಿಕ ಭಾಷಣವನ್ನು ಯೋಜನೆಯ ಮೇಲ್ವಿಚಾರಕಿ ಶ್ರೀಮತಿ ಮಂಜುಳಾ ನೇರ್ಲಿ ನೀಡಿದರು. ಶಾಲಾ ಪ್ರಾಚಾರ್ಯ ಶ್ರೀ ಕಿರಣ ಚೌಗಲಾ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕಿ ಸುಪ್ರೀಯಾ ಕಾರ್ಯಕ್ರಮ ನಿರೂಪಿಸಿದರು ಮತ್ತು ಲೋಕಪ್ಪ ಲಮಾಣಿ ವಂದಿಸಿದರು.
ವರದಿ: ಚೇತನ ಡಿ.ಕೆ
ನಮ್ಮೂರ ಧ್ವನಿ ನ್ಯೂಸ್
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ
+91 95905 51177