ಹುಕ್ಕೇರಿ ವರದಿ:
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ದಿಂದ ಬೇಕರಿ ಅಂಗಡಿ ಸುಟ್ಟು ಭಸ್ಮವಾದ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ನಿಡಸೋಸಿ ಗೇಟ್ ಬಳಿ ನಡೆದಿದೆ.
ನಿಡಸೋಸಿ ಗೇಟ್ ಬಳಿಯ ಅಯ್ಯಂಗಾರ ಬೇಕರಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ. ಇನ್ನೂ ಅಂಗಡಿಯಲ್ಲಿದ್ದ ಮಾಲೀಕ ಉಮೇಶ ಅವರಿಗೂ ಗಾಯಗಳಾಗಿದ್ದು, ಸಂಕೇಶ್ವರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಳಿಕ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಸಂಕೇಶ್ವರ ಪೊಲೀಸರು ಭೇಟಿ ನೀಡಿ ಪರಿಸಿಲನೆ ನಡೆಸಿದ್ದಾರೆ.
ವರದಿ:ಕಲ್ಪಪ ಪಾಮನಾಯಿಕ್