ಬೆಂಗಳೂರು: ನಗರದ ಬಾಗಲಕುಂಟೆಯ ಮುನೇಶ್ವರ ನಗರದಲ್ಲಿ ತಡರಾತ್ರಿ ಮತ್ತೊಂದು ಭೀಕರ ಹತ್ಯೆ ನಡೆದಿದೆ. ಪಾಪಿ ಮಗನೊಬ್ಬ ಹಣಕ್ಕೋಸ್ಕರ ಹೆತ್ತ ತಾಯಿಯನ್ನೇ ರಾಡ್ ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ.
ಆರೋಪಿ ಮಹೇಂದ್ರ ಸಿಂಗ್ ತನ್ನ ತಾಯಿ ಶಾಂತಾಬಾಯಿಯನ್ನು ಕಬ್ಬಿಣದ ರಾಡ್ನಿಂದ ತಲೆಗೆ ಹೊಡೆದು ಕೊಂದಿದ್ದಾನೆ. ವರದಿಗಳ ಪ್ರಕಾರ ಮಹೇಂದ್ರ ಸಿಂಗ್ ಶಾಂತಾಬಾಯಿ ಅವರಿಗೆ ಪ್ರತಿ ದಿನ ಹಣಕ್ಕಾಗಿ ಪೀಡಿಸುತ್ತಿದ್ದ. ನಿನ್ನೆ ರಾತ್ರಿ ಕೂಡಾ ಹಣ ಕೊಡುವಂತೆ ಕಿರುಕುಳ ನೀಡಿದ್ದಾನೆ. ನಂತರ ಜಗಳ ತೀವ್ರವಾಗಿದ್ದು, ಕಬ್ಬಿಣದ ರಾಡ್‌ನಿಂದ ತಾಯಿಯ ತಲೆಗೆ ಬಲವಾಗಿ ಹೊಡೆದು ಸ್ಥಳದಿಂದ ಪರಾರಿಯಾಗಿದ್ದಾನೆ. ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಇದೀಗ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.