ಬೆಳಗಾವಿ ಆಗಷ್ಟ್.೧೪(ಕರ್ನಾಟಕ ವಾರ್ತೆ): ಬೆಳಗಾವಿ ಜಿಲ್ಲಾ ವ್ಯಾಪ್ತಿಯ ೧೪ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿರುವ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಷ್ಟ್.೦೪ ರಂದು ನಿಗದಿಪಡಿಸಲಾಗಿತ್ತು. ಆದರೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ತಾಂತ್ರಿಕ ಸಮಸ್ಯೆಯಿಂದಾಗಿ ಅರ್ಜಿ ಸಲ್ಲಿಸಲು ತೊಂದರೆ ಉಂಟಾಗಿದ್ದು, ಸದರಿ ಸಮಸ್ಯೆಗಳನ್ನು ಸರಿಪಡಿಸಿ ಅರ್ಜಿ ಸಲ್ಲಿಸುವ ದಿನಾಂಕವನ್ನು ಆಗಷ್ಟ್.೨೪ ರವೆರೆಗೆ ವಿಸ್ತರಿಸಲಾಗಿದೆ ಎಂದು ತಪ್ಪಾಗಿ ನಮೂದಾಗಿದೆ. ಸದರಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಷ್ಟ್.೨೫ ರವರೆಗೆ ವಿಸ್ತರಿಸಲಾಗಿದೆ.
ಆಸಕ್ತರು http://karnemakone.kar.nic.in./abcd/ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಬAದಿಸಿದ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ಕಚೇರಿಗಳನ್ನು ಸಂಪರ್ಕಿಸಬುದಾಗಿದೆ ಎಂದು ಬೆಳಗಾವಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.