ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಮನ ಶ್ರೀ ಬಸವೇಶ್ವರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ 2023-24 ನೇ ಸಾಲೀನ ಪಠ್ಯೇತರ ಚಟುವಟಿಕೆಗಳ ಸಮಾರೋಪ ಸಮಾರಂಭ ಹಾಗೂ ಬಿಎ ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿಗಳ ಬಿಳ್ಕೊಡುವ ಸಮಾರಂಭ ಹಾಗೂ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಜರುಗಿತು
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಹಿರಿಯ ಸಾಹಿತಿಗಳಾದ ಶ್ರೀ ಎಸ್. ಎಮ್.ಶಿರೂರ ಮಾತನಾಡಿ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಸಮಾಜಕ್ಕೆ ಉತ್ತಮ ಸಂದೇಶ ನೀಡಬೇಕೆಂದು ಹೇಳಿದರು
ಹುಕ್ಕೇರಿ ಪಿ ಎಲ್ ಡಿ ಬ್ಯಾಂಕಿನ ನಿರ್ದೇಶಕರಾದ ಶ್ರೀ ರಾಚಯ್ಯ ಗುರುಪಾದಯ್ಯ ಹಿರೇಮಠ ಮಾತನಾಡಿ ಶ್ರೀ ಬಸವೇಶ್ವರ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಗುರಪ್ಪ ತಳವಾರ ಅವರು ಗ್ರಾಮೀಣ ಭಾಗದಲ್ಲಿ ಮಹಾವಿದ್ಯಾಲಯವನ್ನು ಪ್ರಾರಂಭಿಸಿರುವುದು ಈ ಭಾಗದ ಸುತ್ತಮುತ್ತಲಿನ ಹಳ್ಳಿಗಳಿಗೆ ಬಹಳಷ್ಟು ಅನುಕೂಲಕರವಾಗಿದ್ದು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಣ ಪಡೆಯುತ್ತಿರುವುದು ಸಂತೋಷಕರ ಸಂಗತಿ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಬಸವೇಶ್ವರ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಗುರಪ್ಪ ತಳವಾರ ಅವರು ವಹಿಸಿದ್ದರು ಮಹಾವಿದ್ಯಾಲಯದ ಪ್ರಾಚಾರ್ಯ ಶ್ರೀ ಮಹೇಶ ಅಂಗಡಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಘೋಡಗೇರಿಯ ಪಿ.ಕೆ.ಪಿ.ಎಸ್.ನಿರ್ಧೇಶಕರಾದ ಬಸ್ತವಾಡೆ, ಗ್ರಾಮ ಪಂಚಾಯತಿ ಸದಸ್ಯರಾದ ಎಂ.ಎಮ್.ಮೋಕಾಶಿ ,ಟಿ.ಎ.ಮೋಕಾಶಿ ಮಹಾವಿದ್ಯಾಲಯದ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಉಪನ್ಯಾಸಕರಾದ ಎ.ವೈ.ಸೋನ್ಯಾಗೋಳ ವಾರ್ಷಿಕ ವರದಿ ವಾಚಿಸಿದರು.ಎಮ್.ಕೆ.ಹಮ್ಮಣ್ಣವರ ಪ್ರಾಸ್ತಾವಿಕವಾಗಿ ಮಾತನಾಡಿದರುಎಸ್.ಕೆ.ಸಣ್ಣಕ್ಕಿ,ಜೆ.ಎ.ಹೊಸಮನಿ,ಎಸ್.ಟಿ.ವಡ್ಡರ, ಅನಿಸಿಕೆಗಳನ್ನು ವ್ಯಕ್ತಪಡಿಸಿದರು ಎ.ಎಸ್.ಹಳೇಮನಿ ಸ್ವಾಗತಿಸಿದರು ವಿದ್ಯಾರ್ಥಿಗಳಾದ ಉಮಾ ಮುಗಳಿ ಹಾಗೂ ವಿಜಯಲಕ್ಷ್ಮಿ ಚೌಗಲಾ ಕಾರ್ಯಕ್ರಮ ನಿರೂಪಿಸಿದರು