ಶ್ರೀ ಸಿದ್ದರಾಮೇಶ್ವರ ಶಿಕ್ಷಣ ಸಂಸ್ಥೆಯ ಅಂಗ ಸಂಸ್ಥೆಯಾದ ಆರ್.ಎ.ಪರ್ವತೆ ಪದವಿ ಪೂರ್ವ ಮಹಾವಿದ್ಯಾಲಯ ಅಗಸಗಿಯಲ್ಲಿ 2024-25 ನೇ ಸಾಲಿನ ವಾರ್ಷಿಕ ಬಹುಮಾನ ವಿತರಣಾ ಕಾರ್ಯಕ್ರಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಎ.ಕೆ ಪಾಟೀಲ್ ಹಿರಿಯ ಉಪನ್ಯಾಸಕರು ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ದೈನಂದಿನ ಜೀವನದಲ್ಲಿ ಶಿಸ್ತು,ಸಂಸ್ಕಾರ, ಜ್ಞಾನವನ್ನು ಗಳಿಸಿದರೆ ಯಶಸ್ಸಿನ ಗುರಿ ತಲುಪಬಹುದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳ ಮಹತ್ವವನ್ನು ಕುರಿತು ತಿಳಿ ಹೇಳಿದರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಅನೇಕ ದೊಡ್ಡ ದೊಡ್ಡ ಹುದ್ದೆಗಳಲ್ಲಿ ಭಾಗಿಯಾಗಬೇಕೆಂದು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ನಾಗನಗೌಡ ಪಾಟೀಲ ಪ್ರಾಚಾರ್ಯರು, ವಿದ್ಯಾರ್ಥಿಗಳ ಕುರಿತು ಮಾತನಾಡಿದರು, ಉತ್ತಮ ಅಂಕಗಳೊಂದಿಗೆ ವಿದ್ಯಾರ್ಥಿಯು ತಮ್ಮ ಭವಿಷ್ಯವನ್ನು ರೂಪಿಸಿಕೊಂಡು ಮುಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉತ್ತಮವಾದ ಜೀವನವನ್ನು ಕಟ್ಟಿಕೊಳ್ಳುವುದರ ಮೂಲ ತಂದೆ ತಾಯಿಗಳಯರ ಆಶಯದಂತೆ ತಮ್ಮ ಉತ್ತಮ ಬದುಕನ್ನು ರೂಪಿಸಿಕೊಳ್ಳಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ, ಸಂಸ್ಕೃತಿಕ ವಿಭಾಗದ ಮುಖ್ಯಸ್ಥರು ನಮ್ರತಾ ಶಂಕರಗೌಡ. ವಿದ್ಯಾರ್ಥಿಗಳ ಪ್ರತಿನಿಧಿಗಳು ಆದಿತ್ಯಾ ಶೆಟ್ಟಿ ,ಕೀರ್ತಿ ನಾಯಕ ,ಹಾಗೂ ಎಲ್ಲ ಉಪನ್ಯಾಸಕ ವೃಂದ ಹಾಗೂ ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅತಿಥಿಗಳ ಪರಿಚಯ ಬಾಬು ಗಡಾದ ಉಪನ್ಯಾಸಕರು, ಬಹುಮಾನ ವಿತರಣೆ ಕಾರ್ಯಕ್ರಮವನ್ನು ಆರತಿ ಅಕ್ಕನವರು ನಡೆಸಿಕೊಟ್ಟರು. ಕಾರ್ಯಕ್ರಮದ ನಿರೂಪಣೆಯನ್ನು ವಿದ್ಯಾರ್ಥಿಯಾದ ಸುಕನ್ಯಾ ಲಟ್ಟಿ , ಸ್ವಾಗತವನ್ನು ಕುಮಾರಿ ಕೀರ್ತಿ ಕಾಂಬಳೆ, ವಂದನಾರ್ಪಣೆಯನ್ನು ಅಕ್ಷತಾ ಪಾಟೀಲ್ ವಿದ್ಯಾರ್ಥಿಗಳು ನೆರವೇರಿಸಿದರು.