ಹುಕ್ಕೇರಿ: ತಾಲೂಕಿನ ಹೊಸಪೇಟೆ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಶಿವಶರಣ ಹಡಪದ ಅಪ್ಪಣ್ಣನವರ 891ನೇ ಜಯಂತಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಗ್ರಾಮ ಪಂಚಾಯಿತಿ ಸದಸ್ಯ ಮತ್ತು ಹಿಡಕಲ್ ಡ್ಯಾಮ್ ನಿವಾಸಿ ಸದಾನಂದ ಮಾಳ್ಯಾಗೋಳ ಅವರು ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಮಾಜಿ ಯೋಧ ಸೋಮಲಿಂಗ ತಿಳಗಂಜಿ ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿ ಬಸವ್ವ ಮಾರುತಿ ಹುರುಳಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಹಡಪದ ಸಮಾಜದ ಮುಖಂಡರಾದ ಶಿವಾನಂದ ನಾವಿ, ಶಿವಲಿಂಗ ನಾವಿ, ಸಿದ್ದಪ್ಪ ನಾವಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರಾದ ಮಹಾನಿಂಗ ಮರೆನ್ನವರ, ಅರ್ಜುನ ನೇಸರ್ಗಿ, ಸುಮಿತ್ರಾ ಬಾಗೇವಾಡಿ ಉಪಸ್ಥಿತರಿದ್ದರು. ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಸಿದ್ದಪ್ಪ ಹರಿಜನ ಮತ್ತು ನಾಗರಿಕರಾದ ರಾಮನಿಂಗ ಮಗದುಮ್ಮ ಸೇರಿದಂತೆ ಗ್ರಾಮದ ಹಿರಿಯರು ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು.
ಮಕ್ಕಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಸಾಹಿತಿ ಪ್ರಕಾಶ ಹೊಸಮನಿ ಕಾರ್ಯಕ್ರಮವನ್ನು ನಿರೂಪಿಸಿದರು.
ವರದಿ: ಎ.ವೈ. ಸೋನ್ಯಾಗೋಳ
ಸುದ್ದಿ ಹಾಗೂ ಜಾಹೀರಾತುಗಳಿಗಾಗಿ ಸಂಪರ್ಕಿಸಿ:
+91 9164577143