ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
ಬೆಳಗಾವಿ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ 2024- 25ನೇ ಸಾಲಿನ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು www.sw.kar.nic.in ಮೂಲಕ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ಸಮಾಜ ಕಲ್ಯಾಣ ಇಲಾಖೆಯ ಆಯಾ ತಾಲೂಕು ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.