ಬೆಳಗಾವಿ ಆಗಷ್ಟ್.೧೪ (ಕರ್ನಾಟಕ ವಾರ್ತೆ): ಪ್ರಸಕ್ತ ಸಾಲಿಗೆ ಕೇಂದ್ರ ಸರ್ಕಾರದ ರಾಷ್ಟಿಯ ವಿದ್ಯಾರ್ಥಿ ವೇತನ (ನ್ಯಾಷನಲ್ಇ-ಸ್ಕಾಲರ್ಶಿಫ್) ಯೋಜನೆಯಡಿ ಪ್ರೀ ಮ್ಯಾಟ್ರಿಕ್, ಪೋಸ್ಟ್ ಮೆಟ್ರಿಕ್ ಹಾಗೂ ಟಾಪ್ಕ್ಲಾಸ್ ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪ್ರೀ ಮೆಟ್ರಿಕ್ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಆಗಷ್ಟ್.೩೧ ಅಂತಿಮ ದಿನಾಂಕವಾಗಿದ್ದು, ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿಗಳಿಗೆ ಹಾಗೂ ಟಾಪ್ಕ್ಲಾಸ್ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ ೩೧-೧೦-೨೦೨೪ ಅಂತಿಮ ದಿನಾಂಕವಾಗಿದೆ.
ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ www.scholarship.gov.in ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ಸೈಟ್ www.disabilityaffairs.gov.in ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.