ರಿಲಯನ್ಸ್ ಫೌಂಡೇಶನ್‌ನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಬೆಂಗಳೂರು: ರಿಲಯನ್ಸ್ ಫೌಂಡೇಶನ್ ವತಿಯಿಂದ 2024-25ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿವೇತನಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿ ರುವ ಪ್ರಥಮ ವರ್ಷದ ವಿದ್ಯಾರ್ಥಿಗಳು ಅರ್ಹತೆ ಹೊಂದಿರುತ್ತಾರೆ. ಪಿಯುಸಿ ಯಲ್ಲಿ ಶೇ.60ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾದ ಸ್ನಾತಕ ಪದವಿ ವಿದ್ಯಾರ್ಥಿ ಗಳು ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಎಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್, ತಂತ್ರಜ್ಞಾನ, ಇಂಧನ ಮತ್ತು ಜೀವ ವಿಜ್ಞಾನ ವಿಷಯಗಳಲ್ಲಿ ವ್ಯಾಸಂಗ ಮಾಡುತ್ತಿರುವವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 6 ಕೊನೆಯ ದಿನವಾಗಿರುತ್ತದೆ. ರಿಲಯನ್ಸ್ ಫೌಂಡೇಶನ್ ವತಿಯಿಂದ ಪ್ರತಿ ವರ್ಷ 5100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದ್ದು, ಇಲ್ಲಿಯವರೆಗೆ ಸುಮಾರು 23 ಸಾವಿರ ಉನ್ನತ ಶಿಕ್ಷಣ ವಿದ್ಯಾರ್ಥಿವೇತನವನ್ನು ಸಂಸ್ಥೆ ಒದಗಿಸಿದೆ. www.scholarships.reliancefoundation.org .