ಅರ್ಜಿ ಆಹ್ವಾನ
ಬೆಳಗಾವಿ ಅ.೩೦ (ಕರ್ನಾಟಕ ವಾರ್ತೆ): ಬೆಳಗಾವಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹಿಳಾ ಅಭಿವೃದ್ಧಿ ನಿಗಮದಿಂದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಯಡಿ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಉದ್ಯೋಗಿನಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಸಂಬAಧಿಸಿದ ಬ್ಯಾಂಕಿನವರು ಸಾಲ ಮಂಜೂರಾತಿ ಪತ್ರವನ್ನು ನೀಡಿದಲ್ಲಿ ಮಾತ್ರ ನಿಗಮದಿಂದ ಸಹಾಯಧನ ಮಂಜೂರು ಮಾಡಲಾಗುತ್ತದೆ.
ಅರ್ಜಿದಾರರಿಗೆ ಆಯ್ಕೆ ಮಾಡಿಸಿ ಸಹಾಯಧನ ಕೊಡಿಸುವುದಾಗಿ ಕೆಲ ಮದ್ಯವರ್ತಿಗಳು ಅರ್ಜಿದಾರರಿಂದ ಹಣ ವಸೂಲಿ ಮಾಡುತ್ತಿರುವುದಾಗಿ ಇಲಾಖೆಯ ಗಮನಕ್ಕೆ ಬಂದಿದ್ದು, ಮದ್ಯವರ್ತಿಗಳಿಗೆ ಯಾವುದೇ ರೀತಿಯಲ್ಲಿ ಆಸ್ಪದ ಇರುವುದಿಲ್ಲ. ಅರ್ಜಿದಾರರು ಮಾತ್ರವೇ ನಿಯಮಾನುಸಾರ ಫಲಾನುಭವಿಗಳಾಗಿ ಆಯ್ಕೆಯಾಗುತ್ತಾರೆ. ಆದ ಕಾರಣ ಯಾವುದೇ ಮದ್ಯವರ್ತಿಗಳಿಗೆ ಹಣ ನೀಡಿ ಮೋಸಹೋಗದಿರಿ ಎಂದು ಸಾರ್ವಜನಿಕರಿಗೆ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಬೆಳಗಾವಿ ಶಿವಾಜಿನಗರದ ಉಪ ನಿರ್ದೇಶಕರ ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ದೂರವಾಣಿ. (೦೮೩೧-೨೪೦೭೨೩೫) ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಉ ಉಪ ನಿರ್ದೇಶಕರು ಅವೆಉ ಪ್ರಕಟಣೆಯಲ್ಲಿ ತಿಳಿಸಿದ್ದಾರೆ