ಬೆಂಗಳೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ರೂಪಿಸಲಾಗಿರುವ ಸಿ ಎಸ್ ಆರ್ ಅನುದಾನದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ ನಿರ್ಮಾಣ ಯೋಜನೆಗೆ ನೋಡಲ್ ಅಧಿಕಾರಿಗಳನ್ನು ಸರಕಾರ ನೇಮಿಸಿದೆ.
ಯಶಸ್ವಿಯಾಗಿ ಈ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಹಾಗೂ ವಿವಿಧ ಸಂಸ್ಥೆಗಳ ಸಿ ಎಸ್ ಆರ್ ಹಣ ಕ್ರೂಢೀಕರಿಸಲು ಕೈಗಾರಿಕೆ ಅಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ ಅವರನ್ನು ಸಮನ್ವಯ ಅಧಿಕಾರಿಯನ್ನಾಗಿ ಜೊತೆಗೆ ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಖುಷ್ಬೂ ಜಿ. ಚೌಧರಿ ಅವರನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.
ಸರ್ಕಾರ ಸೂಚಿಸಿದ ಕಡೆಗಳಲ್ಲಿ, ತಮ್ಮ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ಕೆಪಿಎಸ್ ಶಾಲೆಗಳ ಕಟ್ಟಡ ಹಾಗೂ ಮೂಲಸೌಕರ್ಯಗಳನ್ನು ಖಾಸಗಿ ಸಂಸ್ಥೆಗಳು ತಮ್ಮ ಸಿ ಎಸ್ ಆರ್ ಹಣದಲ್ಲಿ ನಿರ್ಮಿಸಿ ಕೊಡಬೇಕಾಗಿದೆ.